• Home  
  • ಉಡುಪಿ : ಪರಿಶಿಷ್ಟ ಜಾತಿಯ ಉಪಜಾತಿ ಸಮೀಕ್ಷಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ : ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. (Udupi: Properly carry out the Scheduled Caste sub-caste survey work: Deputy Commissioner Vidya Kumari K)
- PROBLEMS

ಉಡುಪಿ : ಪರಿಶಿಷ್ಟ ಜಾತಿಯ ಉಪಜಾತಿ ಸಮೀಕ್ಷಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ : ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. (Udupi: Properly carry out the Scheduled Caste sub-caste survey work: Deputy Commissioner Vidya Kumari K)

Share: ಉಡುಪಿ : ಪರಿಶಿಷ್ಟ ಜಾತಿಯ ಉಪಜಾತಿ ಸಮೀಕ್ಷಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ : ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. (Udupi) ಉಡುಪಿ: ಪರಿಶಿಷ್ಟ ಜಾತಿಯ ಒಳಮೀಸಲಾತಿ ಕಲ್ಪಿಸಲು ಕೈಗೊಂಡಿರುವ ಉಪ ಜಾತಿ ಸಮೀಕ್ಷಾ ಕಾರ್ಯವನ್ನು ಗಣತಿದಾರರು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ […]

(Udupi) ಉಡುಪಿ: ಪರಿಶಿಷ್ಟ ಜಾತಿಯ ಒಳಮೀಸಲಾತಿ ಕಲ್ಪಿಸಲು ಕೈಗೊಂಡಿರುವ ಉಪ ಜಾತಿ ಸಮೀಕ್ಷಾ ಕಾರ್ಯವನ್ನು ಗಣತಿದಾರರು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ಪರಿಶಿಷ್ಟ ಜಾತಿ-ಉಪಜಾತಿ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳಿಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್, ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಮೀಕ್ಷೆ ನಡೆಸುವ ಸಂಬಂಧ ಮೊಬೈಲ್ ಆಪ್ ಮೂಲಕ ಜಿಲ್ಲೆಯಲ್ಲಿ ಮೂರು ಹಂತಗಳಲ್ಲಿ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳಾದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರುಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ. ತರಬೇತಿ ಪಡೆದ ಗಣತಿದಾರರು ನಿಗದಿತ ಅವಧಿಯಲ್ಲಿ ನಿಖರ ಮಾಹಿತಿಯನ್ನು ಕಲೆ ಹಾಕಬೇಕು ಎಂದರು.

 ವಿಭಿನ್ನ ಸ್ಥಳಗಳಲ್ಲಿ ವಾಸವಾಗಿರುವ, ವಿವಿಧ ವೃತ್ತಿಗಳಲ್ಲಿ ತೊಡಗಿರುವ ವ್ಯಕ್ತಿಗಳು ಹಾಗೂ ಜನ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಹಾಗೂ ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡುವುದರೊಂದಿಗೆ ಭವಿಷ್ಯದಲ್ಲಿ ಸರಕಾರದ ಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳಲು ಈ ಸಮೀಕ್ಷೆಯು ಅನುಕೂಲಕರವಾಗಲಿದ್ದು, ಮನೆ ಮನೆ ಭೇಟಿ ನೀಡುವ ಶಿಕ್ಷಕರುಗಳಿಗೆ ಪರಿಶಿಷ್ಟ ಜಾತಿಯ ಸಮುದಾಯದವರು ಮಾಹಿತಿ ನೀಡುವ ಮೂಲಕ ಅಗತ್ಯ ಸಹಕಾರ ನೀಡಬೇಕು ಎಂದರು.

 ಜಿಲ್ಲೆಯಲ್ಲಿ ಮೇ 5 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸುವ ಸಮೀಕ್ಷಾ ಕಾರ್ಯವು ನಡೆಯಲಿದ್ದು, ಮೊದಲನೇ ಹಂತದಲ್ಲಿ ಮೇ 5 ರಿಂದ 17 ರ ವರೆಗೆ ಸಮೀಕ್ಷಾದಾರರು ಮನೆ ಮನೆ ಭೇಟಿ ನೀಡಲಿದ್ದಾರೆ. ಎರಡನೇ ಹಂತದಲ್ಲಿ ಮೇ 19 ರಿಂದ 21 ರ ವರೆಗೆ ವಿಶೇಷ ಶಿಬಿರಗಳನ್ನು ಕೈಗೊಳ್ಳುವ ಮೂಲಕ ಮನೆ ಮನೆ ಭೇಟಿಯ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಲಾಗುವುದು ಎಂದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.