ಎರ್ಮಾಳು : ಅಪಘಾತದಲ್ಲಿ ಗಾಯಗೊಂಡಿದ್ದ ಸ್ಕೂಟಿ ಸವಾರ ಮೃತ್ಯು
(Padubidri) ಪಡುಬಿದ್ರಿ : ರಾ.ಹೆ. 66 ಎರ್ಮಾಳು ಪೆಟ್ರೋಲ್ ಬಂಕ್ ಬಳಿ ಏ.16ರಂದು ಗೂಡ್ಸ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ವೈ. ಭವಾನಿ ಶಂಕರ ಆಚಾರ್ಯ ಪಣಿಯೂರು (65)ರವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಎರ್ಮಾಳಿನ ಬುಧಗಿ ಪೆಟ್ರೋಲ್ ಬಂಕ್ ನೌಕರನಾಗಿದ್ದ ಇವರು ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು.
ತೀವ್ರ ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣ ಹೋರಾಟ ಮಾಡುತ್ತಿದ್ದ ಭವಾನಿ ಶಂಕರ್‌ರವರು ಇಂದು ಬೆಳಿಗ್ಗೆ ಮೃತ ಪಟ್ಟಿದ್ದಾರೆ.
ಭವಾನಿ ಶಂಕರ ಆಚಾರ್ಯರವರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

