ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿನಿಯರಿಂದ ಶಾಲೆಗೆ ಕೀರ್ತಿ
(Kaup) ಕಾಪು: ಕಾಪುವಿನದಂಡತೀರ್ಥ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ದಿವ್ಯಲಕ್ಷ್ಮಿಇವರು ಈ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ600 ರಲ್ಲಿ 590 ಅಂಕಗಳೊಂದಿಗೆ ತೇರ್ಗಡೆಯಾಗಿ ರಾಜ್ಯದಲ್ಲಿ ಹತ್ತನೆಯ ಸ್ಥಾನ (೧೦ rank) ಗಳಿಸಿದ್ದಾಳೆ.
ಪ್ರೌಢಶಾಲಾ ವಿಭಾಗದಲ್ಲಿ 625 ರಲ್ಲಿ 606 ಅಂಕವನ್ನು ಗಳಿಸಿದ ಕುಮಾರಿ ರಿತಿಕಾ ಆರ್ ಶೆಟ್ಟಿ ವಿದ್ಯಾಸಂಸ್ಥೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಅತ್ಯುತ್ತಮ ಪರಿಶ್ರಮದೊಂದಿಗೆ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿಯರನ್ನು ದಂಡತೀರ್ಥ ವಿದ್ಯಾ ಸಂಸ್ಥೆಯ ಸಂಚಾಲಕರಾದ ಡಾಕ್ಟರ್ ಪ್ರಶಾಂತ್ ಶೆಟ್ಟಿ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

