• Home  
  • ಭಾರತ – ಪಾಕ್ ಮಧ್ಯೆ ಕದನ ವಿರಾಮ : ವಿದೇಶಾಂಗ ಸಚಿವರಿಂದ ಪುಷ್ಠಿ
- WAR - PAK

ಭಾರತ – ಪಾಕ್ ಮಧ್ಯೆ ಕದನ ವಿರಾಮ : ವಿದೇಶಾಂಗ ಸಚಿವರಿಂದ ಪುಷ್ಠಿ

Share: (New Dhehli)ನವದೆಹಲಿ : ಇಂದು ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. “ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 15:35 (3:35) ಗಂಟೆಗೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದರು. ಭಾರತೀಯ ಕಾಲಮಾನ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ನೆಲ, ವಾಯು ಮತ್ತು ಸಮುದ್ರದ ಮೂಲಕ ನಡೆಸುವ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು […]

(New Dhehli)ನವದೆಹಲಿ : ಇಂದು ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

“ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 15:35 (3:35) ಗಂಟೆಗೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದರು. ಭಾರತೀಯ ಕಾಲಮಾನ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ನೆಲ, ವಾಯು ಮತ್ತು ಸಮುದ್ರದ ಮೂಲಕ ನಡೆಸುವ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಎರಡೂ ಕಡೆಯವರು ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.


ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ” ಎಂದು ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್ ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.