
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ
(Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ೧೨ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಆವರಣದಲ್ಲಿ ನೆರವೇರಿತು.
ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್‌ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ರವರು ಅಂತಿಮ ವರ್ಷದ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದಲ್ಲಿ ಯಶಸ್ಸನ್ನು ಕಾಣಲು ಹೆಚ್ಚು ಶ್ರಮ ಪಡಬೇಕೆಂದು ಆಶಿಸಿದರು.
ಮೂರನೇ ವರ್ಷದ ವಿದ್ಯಾರ್ಥಿಗಳು ಅನೇಕ ಮನೋರಂಜನಾ ಕಾರ್ಯ ಕ್ರಮವನ್ನು ನಡೆಸುವ ಮೂಲಕ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಮನೋರಂಜಿಸಿದರು.
ಈ ಸಂದರ್ಭದಲ್ಲಿ ಪ್ರತೀ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಎರಡು ಉತ್ತಮ ಪ್ರಾಜೆಕ್ಟ್‌ಗಳಿಗೆ ಬಹುಮಾನ ನೀಡಿಲಾಯಿತು.
ಇದೇ ಸಂದರ್ಭ ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆಯ ಪ್ರಮಾಣ ಪತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ವಿದ್ಯಾರ್ಥಿಗಳು, ಬೋಧನಾವರ್ಗ ಸಿಬ್ಬಂದಿಗಳು ಉಪಸ್ಥಿತರಿದ್ದರು.

