• Home  
  • ಇಹಲೋಕ ತ್ಯಜಿಸಿದ ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್ (Inspector Nanjappa N. of Kundapur Police Station passes away)
- ನಿಧನ

ಇಹಲೋಕ ತ್ಯಜಿಸಿದ ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್ (Inspector Nanjappa N. of Kundapur Police Station passes away)

Share: ಇಹಲೋಕ ತ್ಯಜಿಸಿದ ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್   (Kundapura) ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. (59) ಮೃತಪಟ್ಟಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು, ಕಳೆದ ಅಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ‌ ಪೊಲೀಸ್ ನಿರೀಕ್ಷಕಾರಾಗಿ ಸೇವೆ ಸಲ್ಲಿಸುತ್ತಿದ್ದರು.  ರಕ್ತದೊತ್ತಡದಿಂದ ಬಳಲುತ್ತಿದ್ದ ನಂಜಪ್ಪನವರು, ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಕಾಲ ಚಿಕಿತ್ಸೆ‌ಪಡೆದರೂ, ‌ಅವರ ಆರೋಗ್ಯದಲ್ಲಿ ಯಾವುದೇ ಗಣನೀಯ ಚೇತರಿಕೆ […]

(Kundapura) ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. (59) ಮೃತಪಟ್ಟಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು, ಕಳೆದ ಅಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ‌ ಪೊಲೀಸ್ ನಿರೀಕ್ಷಕಾರಾಗಿ ಸೇವೆ ಸಲ್ಲಿಸುತ್ತಿದ್ದರು.

 ರಕ್ತದೊತ್ತಡದಿಂದ ಬಳಲುತ್ತಿದ್ದ ನಂಜಪ್ಪನವರು, ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಕಾಲ ಚಿಕಿತ್ಸೆ‌ಪಡೆದರೂ, ‌ಅವರ ಆರೋಗ್ಯದಲ್ಲಿ ಯಾವುದೇ ಗಣನೀಯ ಚೇತರಿಕೆ ಕಂಡುಬಂದಿಲ್ಲ. ಬುಧವಾರ ರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

 2003ರಲ್ಲಿ ಉಪನಿರೀಕ್ಷಕರಾಗಿ ಸೇವೆಗೆ ನಿಯುಕ್ತಿಯಾಗಿದ್ದ ನಂಜಪ್ಪ, ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು, ಬಳಿಕ ಪೊಲೀಸ್‌ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿಯಲ್ಲಿ ನಾಲ್ಕು ವರ್ಷ, ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ 2024 ಆಗಸ್ಟ್‌ನಲ್ಲಿ ಕುಂದಾಪುರ ಠಾಣೆ ಪೊಲೀಸ್ ನಿರೀಕ್ಷಕರಾಗಿ‌  ನಿಯುಕ್ತಿಗೊಂಡಿದ್ದರು.
 ಇನ್ಸ್‌ಪೆಕ್ಟರ್ ನಿಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ ಕುಮಾರ್, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. ‌

ಅಂತಿಮ ದರ್ಶನ: ಕುಂದಾಪುರ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪರವರ ಅಂತಿಮದರ್ಶನ ಪಡೆಯಲು ಮೇ.22 ಗುರುವಾರ ಬೆಳಿಗ್ಗೆ 10.15 ಕ್ಕೆ ಕುಂದಾಪುರ ಠಾಣೆಯ ಎದುರು ಅವಕಾಶ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

Leave a comment

Your email address will not be published. Required fields are marked *

eMedia Kannada  @2025. All Rights Reserved.