• Home  
  • ಕಾಪು: ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪುನಶ್ಚೇತನ ಕಾರ್ಯಗಾರ (Kapu: Rehabilitation progamm at Dandatirtha Education trust)
- ಶಾಲಾ ಕಾಲೇಜು

ಕಾಪು: ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪುನಶ್ಚೇತನ ಕಾರ್ಯಗಾರ (Kapu: Rehabilitation progamm at Dandatirtha Education trust)

Share: ಕಾಪು: ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪುನಶ್ಚೇತನ ಕಾರ್ಯಗಾರ ( Kaup)ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶನಿವಾರ ಶಿಕ್ಷಕ – ಶಿಕ್ಷಕೇತರ ವೃಂದಕ್ಕೆ ಪುನಶ್ಚೇತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.  ಸಮಾರಂಭದ ಉದ್ಘಾಟನೆಯನ್ನು ದಂಡತೀರ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ನೆರವೇರಿಸಿದರು. ಅವರು ಮಾತನಾಡಿ, ಶಿಕ್ಷಕರು ಪ್ರತಿವರ್ಷ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ತಮ್ಮನ್ನು ಪರಿಪೂರ್ಣಗೊಳಿಸುವುದರ ಜೊತೆಗೆ, ವಿದ್ಯಾರ್ಥಿಗಳ ಪ್ರತಿಭೆಯನ್ನು ಅರಳಿಸಲು ಸಹಕಾರಿಯಾಗುತ್ತದೆ ಎಂಬ ಸಂದೇಶ ನೀಡಿದರು.  ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿ ಶಾರದಾ ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ […]

( Kaup)ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶನಿವಾರ ಶಿಕ್ಷಕ – ಶಿಕ್ಷಕೇತರ ವೃಂದಕ್ಕೆ ಪುನಶ್ಚೇತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

 ಸಮಾರಂಭದ ಉದ್ಘಾಟನೆಯನ್ನು ದಂಡತೀರ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ನೆರವೇರಿಸಿದರು.

ಅವರು ಮಾತನಾಡಿ, ಶಿಕ್ಷಕರು ಪ್ರತಿವರ್ಷ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ತಮ್ಮನ್ನು ಪರಿಪೂರ್ಣಗೊಳಿಸುವುದರ ಜೊತೆಗೆ, ವಿದ್ಯಾರ್ಥಿಗಳ ಪ್ರತಿಭೆಯನ್ನು ಅರಳಿಸಲು ಸಹಕಾರಿಯಾಗುತ್ತದೆ ಎಂಬ ಸಂದೇಶ ನೀಡಿದರು.

 ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿ ಶಾರದಾ ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಡಿ ಕಾಸ್ಟಾ ಮಾತನಾಡಿ, ಪ್ರತಿಯೊಬ್ಬ ಶಿಕ್ಷಕರು ಕೂಡಾ ಸಂಪನ್ಮೂಲ ವ್ಯಕ್ತಿಗಳೇ ಆಗಿದ್ದಾರೆ. ಆದರೆ ಅವರು ಪ್ರತಿನಿತ್ಯ ಕಲಿಕೆ ಮತ್ತು ಕಲಿಸುವಿಕೆಯಲ್ಲಿ ತೊಡಗಿಸಿಕೊಂಡರೆ, ತಮ್ಮ ಜ್ಞಾನವೃದ್ಧಿಯನ್ನು ಮಾಡುವುದರ ಜೊತೆಗೆ ಮಕ್ಕಳ ಸರ್ವಾಂಗೀಣ ಉನ್ನತಿ ಮಾಡಬಹುದು ಹಾಗೂ  ವಿದ್ಯಾರ್ಥಿಗಳಲ್ಲಿ ವಿಶಿಷ್ಟ ಬದಲಾವಣೆ ಸಾಧ್ಯ ಎಂದರು.  

 ಸಮಾರಂಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್, ಪ್ರಾಥಮಿಕ ವಿಭಾಗದ ಮುಖ್ಯಸ್ಥ ಗೇಬ್ರಿಯಲ್ ಫ್ರೇಂಕಿ ಮಸ್ಕರೇನ್ಹಸ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರಾಜಲಕ್ಷ್ಮೀ ರಾವ್ ಉಪಸ್ಥಿತರಿದ್ದರು.

 ಪ್ರಾಂಶುಪಾಲ ನೀಲಾನಂದ ನಾಯ್ಕ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್ ವಂದಿಸಿದರು. ಶಿಕ್ಷಕ ಉದಯ ಕುಮಾರ್ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.