• Home  
  • ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್‌ ಭೇಟಿ (Home Minister B Parameshwara visits Kaup Sri Hosamarigudi)
- ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್‌ ಭೇಟಿ (Home Minister B Parameshwara visits Kaup Sri Hosamarigudi)

Share:  ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್‌ ಭೇಟಿ (Kaup) ಕಾಪು: ಸಂಪೂರ್ಣ ಜೀರ್ಣೋದ್ಧಾರಗೊಂಡು  ಅತ್ಯಂತ ವಿಜೃಂಭಣೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ನಡೆಸಿರುವ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿಗೆ    ಗೃಹ ಸಚಿವರಾದ ಬಿ ಪರಮೇಶ್ವರ್‌ ಭೇಟಿ ನೀಡಿದರು.  ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.  ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, […]

(Kaup) ಕಾಪು: ಸಂಪೂರ್ಣ ಜೀರ್ಣೋದ್ಧಾರಗೊಂಡು  ಅತ್ಯಂತ ವಿಜೃಂಭಣೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ನಡೆಸಿರುವ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿಗೆ    ಗೃಹ ಸಚಿವರಾದ ಬಿ ಪರಮೇಶ್ವರ್‌ ಭೇಟಿ ನೀಡಿದರು.

 ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.

 ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಹಾಗೂ ಮಾಜಿ ಸಚಿವ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ  ವಿನಯ್ ಕುಮಾರ್ ಸೊರಕೆ ಸಮಿತಿಯ ಪರವಾಗಿ ಗೌರವಿಸಿದರು.

ಈ ಸಂದರ್ಭದಲ್ಲಿ ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಮಾಧವ ಆರ್. ಪಾಲನ್  ಶೇಖರ ಸಾಲ್ಯಾನ್, ಮನೋಹರ ರಾವ್ ಕಲ್ಯ, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಜಯರಾಮ್ ಆಚಾರ್ಯ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.