• Home  
  • ಪ್ರಧಾನಿ ನರೇಂದ್ರ ಮೋದಿ 11 ವರ್ಷ : ಕಾಪುವಿನಲ್ಲಿ   ವಿಕಸಿತ ಭಾರತ ಸಂಕಲ್ಪ ಸಭೆ (Prime Minister Narendra Modi 11 Years : Vikasita Bharat Sankalpa Sabha in Kapu)
- ರಾಜಕೀಯ

ಪ್ರಧಾನಿ ನರೇಂದ್ರ ಮೋದಿ 11 ವರ್ಷ : ಕಾಪುವಿನಲ್ಲಿ   ವಿಕಸಿತ ಭಾರತ ಸಂಕಲ್ಪ ಸಭೆ (Prime Minister Narendra Modi 11 Years : Vikasita Bharat Sankalpa Sabha in Kapu)

Share: ಪ್ರಧಾನಿ ನರೇಂದ್ರ ಮೋದಿ 11 ವರ್ಷ : ಕಾಪುವಿನಲ್ಲಿ   ವಿಕಸಿತ ಭಾರತ ಸಂಕಲ್ಪ ಸಭೆ (Kaup) ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ11 ವರ್ಷ ಪೂರೈಸಿದ ಸಲುವಾಗಿ “ವಿಕಸಿತ ಭಾರತ ಸಂಕಲ್ಪ ಸಭೆ” ಗುರುವಾರ ಕಾಪುವಿನ ವೀರಭದ್ರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ನರೇಂದ್ರ ಮೋದಿ ಅವರು ಪ್ರಧಾನಿಯಾದ 11 […]

(Kaup) ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ11 ವರ್ಷ ಪೂರೈಸಿದ ಸಲುವಾಗಿ “ವಿಕಸಿತ ಭಾರತ ಸಂಕಲ್ಪ ಸಭೆ” ಗುರುವಾರ ಕಾಪುವಿನ ವೀರಭದ್ರ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ, ನರೇಂದ್ರ ಮೋದಿ ಅವರು ಪ್ರಧಾನಿಯಾದ 11 ವರ್ಷದಲ್ಲಿ ವಿಶ್ವದ ಆರ್ಥಿಕತೆಯಲ್ಲಿ ಭಾರತ ನಾಲ್ಕನೇ ಸ್ಥಾನ ಪಡೆದಿದೆ. ಇನ್ನೂ ಕೆಲವೇ ವರ್ಷಗಳಲ್ಲಿ ಮೂರನೇ ಸ್ಥಾನಕ್ಕೆ ಏರಲಿದೆ. ರಕ್ಷಣಾ ಕ್ಷೇತ್ರದಲ್ಲಿ ಭಾರತ ಇಂದು ಸ್ವಾವಲಂಬಿ ಆತ್ಮ ನಿರ್ಭರ ಭಾರತವಾಗಿದೆ. ಇದರಿಂದ ಶತ್ರು ರಾಷ್ಟ್ರಗಳಿಗೆ ನಡುಕ ಹುಟ್ಟಿಸಿದೆ ಎಂದರು.

  ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ  ಜಿತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್, ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ  ಸುದರ್ಶನ್, ಜಿಲ್ಲಾ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್ ಪೆರ್ಣಂಕಿಲ, ನಿಕಟಪೂರ್ವ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪ್ರಸಾದ್ ಶೆಟ್ಟಿ ಕುತ್ಯಾರು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.