• Home  
  • ಜುಲೈ 1 : ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ಕೆ ವಿ ಪ್ರಭಾಕರ್ (July 1 : Free bus pass for journalists – KV Prabhakar)
- help - ರಾಜಕೀಯ

ಜುಲೈ 1 : ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ಕೆ ವಿ ಪ್ರಭಾಕರ್ (July 1 : Free bus pass for journalists – KV Prabhakar)

Share: ಜುಲೈ 1 : ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ಕೆ ವಿ ಪ್ರಭಾಕರ್ (Malemahadeveshwara) ಮಲೆಮಹಾದೇವೇಶ್ವರ ಬೆಟ್ಟ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾದ್ಯಮ ಸಲಹೆಗಾರ ಕೆವಿ ಪ್ರಭಾಕರ್‌ ಹೇಳಿದ್ದಾರೆ. ಅವರು ಮಲೆಮಹಾದೇವೇಶ್ವರ ಬೆಟ್ಟದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಐದನೇ ವರ್ಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ […]

(Malemahadeveshwara) ಮಲೆಮಹಾದೇವೇಶ್ವರ ಬೆಟ್ಟ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾದ್ಯಮ ಸಲಹೆಗಾರ ಕೆವಿ ಪ್ರಭಾಕರ್‌ ಹೇಳಿದ್ದಾರೆ.

ಅವರು ಮಲೆಮಹಾದೇವೇಶ್ವರ ಬೆಟ್ಟದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಐದನೇ ವರ್ಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

  5 ಲಕ್ಷ ರೂಪಾಯಿ ವರೆಗಿನ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಒದಗಿಸುವ ಪತ್ರಕರ್ತರ ಆರೋಗ್ಯ ಕಾರ್ಡ್ ವ್ಯವಸ್ಥೆಯನ್ನೂ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಆರೋಗ್ಯ ಸಂಜೀವಿನಿ ಕಾರ್ಡ್ ಕೂಡ ಜುಲೈ 1 ರಂದು ನೀಡಲಾಗುವುದು ಎಂದು ಭರವಸೆ ನೀಡಿದರು.

 ಜಿಲ್ಲಾ ಪತ್ರಕರ್ತರ ಭವನ ಮತ್ತು ತಾಲ್ಲೂಕು ಪತ್ರಕರ್ತರ ಭವನದ ನಿರ್ಮಾಣಕ್ಕೂ ಸರ್ಕಾರದ ಜೊತೆ ಮಾತನಾಡಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.