ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : “ವಾಹನದ ಹೊಗೆ ತಪಾಸಣೆ ಬಗ್ಗೆ ಜಾಗೃತಿ ಮತ್ತು ಪರಿಸರ ಸಂರಕ್ಷಣಾ ಸ್ಟಿಕ್ಕರ್” ಅಳವಡಿಕೆ ಕಾರ್ಯಕ್ರಮ
(ಚಿತ್ರ ಕೃಪೆ : ರವಿ ಡಿಜಿಟಲ್ಸ್ ಪಡುಬಿದ್ರಿ)
(Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025 ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ ರೋಟರಿ ಕ್ಲಬ್ ಪಡುಬಿದ್ರಿ, ಲಯನ್ಸ್ ಕ್ಲಬ್ ಪಡುಬಿದ್ರಿ ಇವರ ಸಹಯೋಗದೊಂದಿಗೆ ನಡೆದ ವಾಹನದ ಹೊಗೆ ತಪಾಸಣೆ ಬಗ್ಗೆ ಜಾಗೃತಿ ಮತ್ತು ಪರಿಸರ ಸಂರಕ್ಷಣಾ ಸ್ಟಿಕ್ಕರ್ ಅಳವಡಿಕೆ ಕಾರ್ಯಕ್ರಮವನ್ನು ಜೆಸಿಐ ಮಾಜಿ ಅಧ್ಯಕ್ಷ ಜಯ ಶೆಟ್ಟಿ ಪದ್ರ ಉದ್ಘಾಟಿಸಿದರು.
ಈ ಕಾರ್ಯಕ್ರಮವು “ಮಾಲಿನ್ಯ ಮುಕ್ತ ಪರಿಸರ ನಮ್ಮೆಲ್ಲರ ಹಕ್ಕು” ಧ್ಯೇಯದೊಂದಿಗೆ “ವಾಹನದ ಹೊಗೆ ತಪಾಸಣೆ ಬಗ್ಗೆ ಜಾಗೃತಿ ಮತ್ತು ಪರಿಸರ ಸಂರಕ್ಷಣಾ ಸ್ಟಿಕ್ಕರ್ ಅಳವಡಿಕೆ’ ಅಭಿಯಾನದಡಿ ನಡೆದಿದ್ದು,
ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರಿ ಇವರ ಸಹಕಾರದೊಂದಿಗೆ ಪಡುಬಿದ್ರಿ ಬಸ್ ನಿಲ್ದಾಣ ಹಾಗೂ ಹೆಜಮಾಡಿ ಬಸ್ ನಿಲ್ದಾಣ ಮತ್ತು ಎರ್ಮಾಳು ಬಸ್ ನಿಲ್ದಾಣದಲ್ಲಿ ನಡೆಯಿತು.
ಪಡುಬಿದ್ರಿ ಸಹಕಾರಿ ಸೊಸೈಟಿಯ ಅಧ್ಯಕ್ಷ ವೈ ಸುಧೀರ್ ಕುಮಾರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, “ಸಹಕಾರ ಸಂಸ್ಥೆಗಳ ಮೂಲಕ ಉತ್ತಮ ಜಗತ್ತನ್ನು ನಿರ್ಮಿಸಲು ಸಾಧ್ಯ” ಎಂಬ ಧ್ಯೇಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ಸೂಚನೆಯಂತೆ ಅಂತಾರಾಷ್ಟ್ರೀಯ ಸಹಕಾರ ವರ್ಷ -2025 ಸಂಭ್ರಮಾಚರಣೆ ಸಂದರ್ಭದಲ್ಲಿ ಮೂರನೇ ದಿನವಾದ ಇಂದು ವಾಹನದ ಹೊಗೆ ತಪಾಸಣೆ ಬಗ್ಗೆ ಜಾಗೃತಿ ಮತ್ತು ಪರಿಸರ ಸಂರಕ್ಷಣಾ ಸ್ಟಿಕ್ಕರ್ ಅಳವಡಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪರಿಸರವನ್ನು ಉಳಿಸಿ ಸ್ವಚ್ಛತೆಯಿಂದ ಕಾಪಾಡಿಕೊಳ್ಳದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಮುಂದಿನ ಜನಾಂಗಕ್ಕೆ ಹಾಗೂ ನಮಗೆ ಅನೇಕ ತೊಂದರೆ ಉಂಟಾಗುತ್ತದೆ. ಆದ್ದರಿಂದ ನಾಗರೀಕರೆಲ್ಲರೂ ಸ್ವಚ್ಛತೆಯನ್ನು ಕಾಪಾಡಿಕೊಂಡು ಬಂದರೆ ಉತ್ತಮ ವಾತಾವರಣ ನಿರ್ಮಾಣ ಮಾಡಬಹುದು ಎಂದರು.
ಕಾರ್ಯಕ್ರಮದಲ್ಲಿ ಜಯ ಶೆಟ್ಟಿಪದ್ರರವರು ವಾಹನದ ಹೊಗೆಯಿಂದ ಹೇಗೆ ಪರಿಸರವನ್ನು ಹೇಗೆ ಕಾಪಾಡಿಕೊಳ್ಳುವುದು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಪಡುಬಿದ್ರಿ ಸಿ.ಎ. ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್, ಉಪಾಧ್ಯಕ್ಷ ಗುರುವ ಪೂಜಾರಿ, ನಿರ್ದೇಶಕರಾದ ಗಿರೀಶ್ ಪಲಿಮಾರು, ಕೃಷ್ಣ ಬಂಗೇರ, ಮಾಧವ ಆಚಾರ್ಯ, ರೋಹಿಣಿ ಎ., ಕುಸುಮಾ ಕರ್ಕೇರ, ಶಿವರಾಮ ಎನ್ ಶೆಟ್ಟಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಎಚ್.ಪುತ್ರನ್ ಉಪಸ್ಥಿತರಿದ್ದರು.
ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸ್ವಾಗತಿಸಿದರು. ನಿಖಿಲ್ ಪೂಜಾರಿ ನಿರೂಪಿಸಿ, ವಂದಿಸಿದರು.

