28. ಜೂನ್ : ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಪದಗ್ರಹಣ
(Kaup) ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ, ಕಾಪು ಬ್ಲಾಕ್ ಯುವಕಾಂಗ್ರೆಸ್ ಸಮಿತಿ (ದಕ್ಷಿಣ & ಉತ್ತರ)ಇದರ ಪದಪ್ರಧಾನ ಸಮಾರಂಭ ಶನಿವಾರ ಸಾಯಂಕಾಲ 5:00 ಗಂಟೆಗೆ ಕಾಪು ರಾಜೀವ ಭವನದಲ್ಲಿ ನಡೆಸಲಾಗುವುದು.
ಈ ಕಾರ್ಯಕ್ರಮಕ್ಕೆ ಮಾಜಿ ಸಚಿವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿ ಅಧ್ಯಕ್ಷರು ವಿನಯ ಕುಮಾರ್ ಸೊರಕೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ (ಉತ್ತರ)ಅಧ್ಯಕ್ಷರಾದ ಸಂತೋಷ್ ಕುಲಾಲ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ದೀಪಕ್ ಕೋಟ್ಯಾನ್, ಉಡುಪಿ ಜಿಲ್ಲಾ ಯುವಕಾಂಗ್ರೆಸ್ ನ ಉಪಾಧ್ಯಕ್ಷರು ಹಾಗೂ ಕಾಪು ವಿಧಾನಸಭಾಕ್ಷೇತ್ರದ ಉಸ್ತುವಾರಿಯಾಗಿರುವ ಅರ್ಜುನ್ ನಾಯರಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ (ದಕ್ಷಿಣ) ಇದರ ಅಧ್ಯಕ್ಷ ಗೌರೀಶ್ ಕೋಟ್ಯಾನ್, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಇದರ ಅಧ್ಯಕ್ಷ ಶರತ್ ನಾಯ್ಕ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ (ದಕ್ಷಿಣ) ಮಾಜಿ ಅಧ್ಯಕ್ಷ ರಮೀಜ್ ಹುಸೇನ್, ಕಾಪು ಬ್ಲಾಕ್ ಯುವಕಾಂಗ್ರೆಸ್ ಸಮಿತಿ (ಉತ್ತರ) ಇದರ ಮಾಜಿ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೊಮ್ಮರಬೆಟ್ಟು, ಕಾಂಗ್ರೆಸ್ ಮುಖಂಡರು, ನಿಗಮ ಮಂಡಳಿಯ ಸದಸ್ಯರು, ಮುಂಚೂಣಿ ಘಟಕದ ವಿಭಾಗದ ಅಧ್ಯಕ್ಷರುಗಳು, ಕಾಪು ಬ್ಲಾಕ್ ಕಾಂಗ್ರೆಸ್ ನ ಮುಖಂಡರುಗಳು, ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಉಪಸ್ಥಿತಲಿರುವರು ಎಂದು ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಿಯಾಜ್ ಪಡುಬಿದ್ರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

