ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಭೇಟಿ, ಪ್ರಾರ್ಥನೆ
(Uchila) ಉಚ್ಚಿಲ : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಗುರುವಾರ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು.
ದೇವಳದ ಪ್ರಧಾನ ಅರ್ಚಕ ವೇದ ಮೂರ್ತಿ ರಾಘವೇಂದ್ರ ಉಪಾಧ್ಯಾಯರವರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭ ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಮಹಾಲಕ್ಷ್ಮೀ ದೇಗುಲ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ, ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ವಿಶ್ವಾಸ್ ಅಮೀನ್, ದಿನೇಶ್ ಎರ್ಮಾಳು, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಸುಗುಣ ಎಸ್. ಕರ್ಕೇರ, ರಚನ್ ಸಾಲ್ಯಾನ್, ದೇವಳದ ಪ್ರಭಂದಕರಾದ ಸತೀಶ್ ಅಮೀನ್ ಪಡುಕರೆ, ಕಾಪು ಮಹಿಳಾ ಸಂಘದ ಸದಸ್ಯೆಯರು ಉಪಸ್ಥಿತರಿದ್ದರು.

