ಕಾಪು : ಶ್ರೀ ಹೊಸ ಮಾರಿಗುಡಿಗೆ ಮುಜರಾಯಿ, ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ, ಪ್ರಾರ್ಥನೆ
(Kaup) ಕಾಪು: ಕರ್ನಾಟಕ ಸರಕಾರದ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿಯವರು ಭಾನುವಾರ ಬೆಳಿಗ್ಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.
ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.
ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಸರಕಾರದ ಅನುದಾನವಿಲ್ಲದೆ ದಾನಿಗಳ ಮತ್ತು ಭಕ್ತರ ನೆರವಿನಿಂದ ಇಷ್ಟು ದೊಡ್ಡ ದೇವಸ್ಥಾನ ನಿರ್ಮಾಣ ಮಾಡಿರುವುದು ಬಹಳ ಸಂತೋಷ, ಇಲ್ಲಿನ ವಾಸ್ತುಶಿಲ್ಪ ಬಹಳಷ್ಟು ಚೆನ್ನಾಗಿ ಮೂಡಿಬಂದಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಉಡುಪಿ ಸ್ವರೂಪ ಟಿ.ಕೆ, ದೇವಳದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಮಾಜಿ ಸಚಿವ ಮತ್ತು ಗೌರವಾಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ಸಚಿವ ಅಭಯ ಚಂದ್ರ ಜೈನ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಉಡುಪಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಮಂಜುಳಾ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಅಧ್ಯಕ್ಷ ಭಾಸ್ಕರ ದೇವಾಡಿಗ, ಕಾಪು ತಹಶಿಲ್ದಾರ್ ಪ್ರತಿಭಾ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ದೇವಳದ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಮಾಧವ ಆರ್ ಪಾಲನ್, ಶೇಖರ ಸಾಲ್ಯಾನ್, ಮನೋಹರ ರಾವ್ ಕಲ್ಯ, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಸುರೇಶ್ ಶೆಟ್ಟಿ, ಚರಿತ ದೇವಾಡಿಗ, ಯೋಗೀಶ್ ವಿ. ಶೆಟ್ಟಿ, ಸಾವಿತ್ರಿ ಗಣೇಶ್, ಕಾಪು ಪುರಸಭಾ ಸದಸ್ಯ ದೇವರಾಜ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

