• Home  
  • ರಾ.ಹೆ. 66ರ ಅವೈಜ್ಞಾನಿಕ ಕಾಮಗಾರಿ : ಪ್ರತಿಭಟನೆಯ ಎಚ್ಚರಿಕೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ (Unscientific work on NH 66: Karnataka Rakshana Vedike warns of protest)
- PROBLEMS - protest

ರಾ.ಹೆ. 66ರ ಅವೈಜ್ಞಾನಿಕ ಕಾಮಗಾರಿ : ಪ್ರತಿಭಟನೆಯ ಎಚ್ಚರಿಕೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ (Unscientific work on NH 66: Karnataka Rakshana Vedike warns of protest)

Share: ರಾ.ಹೆ. 66ರ ಅವೈಜ್ಞಾನಿಕ ಕಾಮಗಾರಿ : ಪ್ರತಿಭಟನೆಯ ಎಚ್ಚರಿಕೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ (Kaup) ಕಾಪು : ರಾ.ಹೆ. 66ರ ಅವೈಜ್ಞಾನಿಕ ಕಾಮಗಾರಿಯಿಂದ ಪ್ರತಿದಿನ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಹೆದ್ದಾರಿಯ ವಿವಿಧ ಸಮಸ್ಯೆಗಳನ್ನು ಒಂದು ತಿಂಗಳೊಳಗೆ ಪರಿಹರಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಸಿದೆ.  ಗುರುವಾರ ಕಾಪು ಪ್ರೆಸ್‌ಕ್ಲಬ್‌ನಲ್ಲಿ ಜರಗಿದ ಸುದ್ದಿ ಗೋಷ್ಠಿಯಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಮಾತನಾಡಿ, ಹೆಜಮಾಡಿ- ಪಡುಬಿದ್ರಿ ಸರ್ವಿಸ್ […]

(Kaup) ಕಾಪು : ರಾ.ಹೆ. 66ರ ಅವೈಜ್ಞಾನಿಕ ಕಾಮಗಾರಿಯಿಂದ ಪ್ರತಿದಿನ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಹೆದ್ದಾರಿಯ ವಿವಿಧ ಸಮಸ್ಯೆಗಳನ್ನು ಒಂದು ತಿಂಗಳೊಳಗೆ ಪರಿಹರಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಸಿದೆ.

 ಗುರುವಾರ ಕಾಪು ಪ್ರೆಸ್‌ಕ್ಲಬ್‌ನಲ್ಲಿ ಜರಗಿದ ಸುದ್ದಿ ಗೋಷ್ಠಿಯಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಮಾತನಾಡಿ, ಹೆಜಮಾಡಿ- ಪಡುಬಿದ್ರಿ ಸರ್ವಿಸ್ ರಸ್ತೆಯ ಕಾಮಗಾರಿಯ ಬೇಡಿಕೆಯಿದ್ದು , ಕಾಮಗಾರಿಯ ಸರ್ವೆ ಹಾಗೂ ಇನ್ನಿತರ ಪ್ರಕ್ರಿಯೆಗಳನ್ನು ಕೂಡಲೇ ಮುಗಿಸಿ ಟೆಂಡರ್ ಕರೆದು 30 ದಿನದೊಳಗೆ ಕಾಮಗಾರಿ ಪ್ರಾರಂಭಿಸಬೇಕು. ರಾ. ಹೆ. ಉದ್ದಕ್ಕೂ ಕೆಟ್ಟಿರುವ ಬೀದಿ ದೀಪಗಳ ದುರಸ್ತಿ, ಸಮಯಕ್ಕೆ ಸರಿಯಾಗಿ ದೀಪ ಉರಿಸುವಂತೆ ಕ್ರಮವಹಿಸಬೇಕು.

ಪಡುಬಿದ್ರಿ ಪರಿಸರದಲ್ಲಿ ಅಪಘಾತ ಉಂಟಾಗುತ್ತಿದೆ. ಇದನ್ನು ತಡೆಗಟ್ಟಲು ಸಾರ್ವಜನಿಕರ ಬಹು ವರ್ಷಗಳ ಬೇಡಿಕೆಯಾದ ಮೇಲ್ಸೇತುವೆ ಶೀಘ್ರವಾಗಿ ನಿರ್ಮಾಣ ಆಗುವಂತೆ ಕ್ರಮಕೈಗೊಳ್ಳಬೇಕು.

ಪಡುಬಿದ್ರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಾಹನಗಳಿಗೆ ಈ ಹಿಂದೆ ಉಚಿತ ಸಂಚಾರಕ್ಕೆ ಕಲ್ಪಿಸಲಾಗಿತ್ತು. ಬಳಿಕ ಅದನ್ನು ರದ್ದುಗೊಳಿಸಲಾಗಿದೆ. ಪಡುಬಿದ್ರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಾಹನಗಳಿಗೆ ಉಚಿತ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು.

ಸುಂಕ ವಸೂಲಾತಿ ಕೇಂದ್ರದ ಬಳಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಅಪಘಾತವಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲು ಬೇಕಾದ ಆಂಬುಲೆನ್ಸ್‌ ವ್ಯವಸ್ಥೆಯನ್ನು ಮಾಡಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಹೆದ್ದಾರಿ 66ರಲ್ಲಿಯ ಎಲ್ಲಾ ಹೊಂಡಗಳನ್ನು ಶನಿವಾರದೊಳಗೆ ಮುಚ್ಚಬೇಕು. ಇಲ್ಲದಿದ್ದಲ್ಲಿ ಮುಂದೆ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಕರವೇ ಮೂಲಕ ನಾವೇ ಮುಚ್ಚುವುದಾಗಿ ಅನ್ಸಾರ್ ಅಹಮದ್ ಹೇಳಿದರು.

 ಟೋಲ್ ಕೇಂದ್ರದಲ್ಲಿ ಮೂಲಸೌಕರ್ಯ ಸಹಿತ ಹಲವಾರು ಸಮಸ್ಯೆ ಇದೆ. ಈ ಬಗ್ಗೆ ಅಲ್ಲಿನ  ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಾರೆ. ಮುಂದಿನ ದಿನಗಳಲ್ಲಿ ಇದನ್ನು ಟೋಲ್ ಅಧಿಕಾರಿಗಳು ಮುಂದುವರಿಸಿದರೆ, ಟೋಲ್ ಎದುರೇ ತಕ್ಕ ಉತ್ತರ ನೀಡಲಾಗುವುದು ಎಂದು ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ನಿಝಾಮ್ ಅಹಮದ್ ಎಚ್ಚರಿಸಿದರು.

 ಜಿಲ್ಲಾಧಿಕಾರಿಗೆ ಮನವಿ: ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ರಕ್ಷಣಾ ವೇದಿಕೆಯ ಮುಖಂಡರು, ಪದಾಧಿಕಾರಿಗಳು ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಅವರು ಮನವಿಗೆ ಸ್ಪಂಧಿಸಿ ಬೇಡಿಕೆ ಈಡೇರಿಸುವ ಭರವಸೆಯನ್ನು ನೀಡಿದ್ದಾರೆ.

  ಪಡುಬಿದ್ರಿ ಘಟಕದ ಅಧ್ಯಕ್ಷ ಪ್ರಶಾಂತ್ ಸಾಲ್ಯಾನ್, ಪಡುಬಿದ್ರಿ ಗ್ರಾಮ ಪಂಚಾಯಿತಿ ಸದಸ್ಯ ಎಂ.ಎಸ್. ಶಫಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷ ಜ್ಯೋತಿ ಶೇರಿಗಾರ್, ಉಪಾಧ್ಯಕ್ಷೆ ಕಿರಣ್ ಪ್ರತಾಪ್, ಗಫ್ಫಾರ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.