• Home  
  • ಮುಂಡ್ಕೂರು: ಬಪ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಗುಂಡಿ, ವಾಹನ ಸವಾರರ ಪರದಾಟ (Mundkur: Huge pothole on Bappe Atradi State Highway, motorists panic)
- Mansoon - PROBLEMS

ಮುಂಡ್ಕೂರು: ಬಪ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಗುಂಡಿ, ವಾಹನ ಸವಾರರ ಪರದಾಟ (Mundkur: Huge pothole on Bappe Atradi State Highway, motorists panic)

Share: ಮುಂಡ್ಕೂರು: ಬಪ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಗುಂಡಿ, ವಾಹನ ಸವಾರರ ಪರದಾಟ   (Mundkooru) ಮುಂಡ್ಕೂರು: ಮುಂಡ್ಕೂರು ಪರಿಸರದ  ರಸ್ತೆಗಳು ಗುಂಡಿಮಯವಾಗಿದ್ದು, ಗುಂಡಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸುವ ಪರಿಸ್ಥಿತಿ ನೆಲೆಸಿದೆ. ಅದರಲ್ಲೂ ಮಳೆ ಸಂದರ್ಭ ರಸ್ತೆಯಲ್ಲಿ ನೀರು ನಿಲ್ಲುವುದರಿಂದ ಗುಂಡಿಗಳ ಬಗ್ಗೆ ಗೊತ್ತಿಲ್ಲದೆ ದ್ವಿಚಕ್ರ ವಾಹನ ಸವಾರರು ಗುಂಡಿಗೆ ಬಿದ್ದು ಅಪಘಾತಕ್ಕೆ ಸಿಲುಕುತ್ತಿದ್ದಾರೆ.  ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜೈನಪೇಟೆ ಹಾಗೂ ಪಡಿತ್ತಾರು ಬಳಿ ರಾಜ್ಯ […]

(Mundkooru) ಮುಂಡ್ಕೂರು: ಮುಂಡ್ಕೂರು ಪರಿಸರದ  ರಸ್ತೆಗಳು ಗುಂಡಿಮಯವಾಗಿದ್ದು, ಗುಂಡಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸುವ ಪರಿಸ್ಥಿತಿ ನೆಲೆಸಿದೆ. ಅದರಲ್ಲೂ ಮಳೆ ಸಂದರ್ಭ ರಸ್ತೆಯಲ್ಲಿ ನೀರು ನಿಲ್ಲುವುದರಿಂದ ಗುಂಡಿಗಳ ಬಗ್ಗೆ ಗೊತ್ತಿಲ್ಲದೆ ದ್ವಿಚಕ್ರ ವಾಹನ ಸವಾರರು ಗುಂಡಿಗೆ ಬಿದ್ದು ಅಪಘಾತಕ್ಕೆ ಸಿಲುಕುತ್ತಿದ್ದಾರೆ.

 ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜೈನಪೇಟೆ ಹಾಗೂ ಪಡಿತ್ತಾರು ಬಳಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡಗಳಾಗಿದ್ದು, ಚರಂಡಿ ವ್ಯವಸ್ಥೆ ಇಲ್ಲದೆ ಮಳೆಯ ನೀರು ರಸ್ತೆಯಲ್ಲಿ ಹರಿದು ಹಲವಾರು ಅವಾಂತರಗಳಿಗೆ ಕಾರಣವಾಗುತ್ತಿದೆ.

ಚರಂಡಿ ಇಲ್ಲದೆ ಹೆದ್ದಾರಿಯಲ್ಲಿ ಹರಿಯುವ ಮಳೆಯ ನೀರು

ಈ ಭಾಗದಲ್ಲಿ ರಸ್ತೆ ಕಿರಿದಾಗಿದ್ದು, ಚರಂಡಿ ವ್ಯವಸ್ಥೆ ಇಲ್ಲದೆ ಮಳೆಯ ನೀರು ರಸ್ತೆಯಲ್ಲಿ ಹರಿಯುವುದರಿಂದ ಬೃಹತ್ ಗಾತ್ರದ ಹೊಂಡಗಳು ನಿರ್ಮಾಣವಾಗಿ ಹಲವು ಬಾರಿ ಅಪಘಾತಗಳು ಸಂಭವಿಸಿವೆ‌. ಮಳೆಯ ನೀರು ರಸ್ತೆಯಲ್ಲಿ ಹರಿಯುವುದರಿಂದ ಪಾದಾಚಾರಿಗಳು, ವಿದ್ಯಾರ್ಥಿಗಳು ಮಳೆಯ ಸಂದರ್ಭದಲ್ಲಿ ರಸ್ತೆಯ ಬದಿ ನಡೆದುಕೊಂಡು ಹೋಗಲು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

 ಈ ಭಾಗದಲ್ಲಿ ರಾಜ್ಯ ಹೆದ್ದಾರಿ ಕಿರಿದಾಗಿದ್ದು, ದಿನನಿತ್ಯ ಅನೇಕ ಘನ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಮುಂಡ್ಕೂರು – ಪಡಿತ್ತಾರ್ ಸೇತುವೆಯಿಂದ ಪೇಟೆಯ ಹೃದಯ ಭಾಗ, ಜೈನ ಪೇಟೆಯವರಿಗೆ ರಸ್ತೆ ಅಗಲೀಕರಣ ಕಾಮಗಾರಿ ಇನ್ನಷ್ಟೆ ಆಗಬೇಕಾಗಿದೆ. ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್, ಹೆದ್ದಾರಿ ಇಲಾಖೆ, ಮತ್ತು ಜಿಲ್ಲಾಡಳಿತ ಈ ಬಗ್ಗೆ ತುರ್ತಾಗಿ ಸ್ಪಂದಿಸಿ ರಸ್ತೆ ಅಗಲೀಕರಣ ಹಾಗೂ ಹೊಂಡಗಳ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.