ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ
(Belman) ಬೆಳ್ಮಣ್ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಮಣ್‌ನಲ್ಲಿ ಸಂಭವಿಸಿದೆ.
ಕೆ.ಪ್ರಕಾಶ್ ಪೈ (56) ಆತ್ಮಹತ್ಯೆಗೆ ಶರಣಾದವರು.
ಇವರು ಕಳೆದ ಒಂದು ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆ. 12ರಂದು ಬೆಳಿಗ್ಗೆ 6 ಗಂಟೆಗೆ ಮನೆಯಿಂದ ಹೊರಗಡೆ ಹೋದವರು ವಾಪಾಸು ಮನೆಗೆ ಬಾರದೆ ಇದ್ದು, ಅವರ ಹುಡುಕಾಟದಲ್ಲಿರುವಾಗ ಆ. 14ರಂದು ಮಧ್ಯಾಹ್ನ ಬೆಳ್ಮಣ್ ಗ್ರಾಮದ ಬಿ.ಎಂ. ಕಾಮತ್ ಅವರ ಮನೆಯ ಬಾವಿಯ ನೀರಿನಲ್ಲಿ ಕವುಚಿ ಬಿದ್ದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿರುತ್ತದೆ.
ಮೃತರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದೇ ವೇದನೆಯಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಎಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

