• Home  
  • ಧರ್ಮಸ್ಥಳ ಪ್ರಕರಣ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮೊದಲ ಮಾತು (Dharmasthala case: Dharmadhikari Dr. D. Veerendra Heggade’s first statement)
- PROBLEMS

ಧರ್ಮಸ್ಥಳ ಪ್ರಕರಣ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮೊದಲ ಮಾತು (Dharmasthala case: Dharmadhikari Dr. D. Veerendra Heggade’s first statement)

Share: ಧರ್ಮಸ್ಥಳ ಪ್ರಕರಣ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮೊದಲ ಮಾತು   ಆಧಾರವಿಲ್ಲದ ಆರೋಪದಿಂದ ಭಕ್ತರಲ್ಲಿ ಕಳವಳ ಉಂಟಾಗಿದೆ       ಧರ್ಮಸ್ಥಳ : ಧರ್ಮಸ್ಥಳದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ( SIT)ಅಧಿಕಾರಿಗಳು ಬಂಧಿಸಿರುವುದನ್ನು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸ್ವಾಗತಿಸಿದ್ದಾರೆ.  ಅನಾಮಿಕ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಎಸ್ ಐಟಿ ಅಧಿಕಾರಿಗಳು […]

 ಧರ್ಮಸ್ಥಳ : ಧರ್ಮಸ್ಥಳದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ( SIT)ಅಧಿಕಾರಿಗಳು ಬಂಧಿಸಿರುವುದನ್ನು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸ್ವಾಗತಿಸಿದ್ದಾರೆ.

 ಅನಾಮಿಕ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಎಸ್ ಐಟಿ ಅಧಿಕಾರಿಗಳು ಹಾಜರುಪಡಿಸಿದ ನಂತರ ಮಾತನಾಡಿದ ವಿರೇಂದ್ರ ಹೆಗ್ಗಡೆ ಅವರು, ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ ಎಂದು ಹೇಳಿದ್ದಾರೆ.

  ಧರ್ಮಸ್ಥಳದ ವಿರುದ್ಧ ಆಧಾರವಿಲ್ಲದ ಆರೋಪ ಮಾಡಲಾಗುತ್ತಿದೆ. ಇದರಿಂದ ದೊಡ್ಡ ಪ್ರಮಾಣದ ಭಕ್ತರು ಮತ್ತು ಸಮುದಾಯದಲ್ಲಿ ಕಳವಳ ಉಂಟಾಗಿದೆ. ಇದೀಗ ದೂರುದಾರ ಬಂಧನದಿಂದ ಸತ್ಯಾಂಶ ಹೊರ ಬಂದು, ನ್ಯಾಯ ಸಿಗುವ ನಂಬಿಕೆ ಇದೆ ಎಂದಿದ್ದಾರೆ.

 ಈ ಹೇಳಿಕೆಯ ಮೂಲಕ ವಿಶೇಷ ತನಿಖಾ ದಳದ (SIT) ತನಿಖೆಯಲ್ಲಿ ಆರೋಪಗಳ ದುರುದ್ದೇಶಪೂರಿತ ಸ್ವರೂಪ ಬಯಲಾಗುತ್ತಿದೆ ಎಂದು ಸೂಚಿಸಿದ್ದಾರೆ.

 ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದಿದ್ದಾರೆ, ಅಲ್ಲದೇ ತನಿಖೆಯ ಹಂತದಲ್ಲಿ ಹೆಚ್ಚಿನದನ್ನು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.