• Home  
  • ನಿಟ್ಟೆ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತʼ ಅಭಿಯಾನ (‘Drug-free India’ campaign at Nitte College)
- ಸನ್ಮಾನ, ಅಭಿನಂದನೆ

ನಿಟ್ಟೆ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತʼ ಅಭಿಯಾನ (‘Drug-free India’ campaign at Nitte College)

Share: ನಿಟ್ಟೆ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತʼ ಅಭಿಯಾನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ (Nitte) ನಿಟ್ಟೆ : ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನ ವಿರೋಧಿ ಸಮಿತಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೇಂಜರ್ಸ್‌ ಮತ್ತು ರೋವರ್ಸ್‌ ಘಟಕ,   ಯೂತ್ ರೆಡ್ ಕ್ರಾಸ್ ಸೊಸೈಟಿ ಸಹಯೋಗದಲ್ಲಿ ಕಾರ್ಕಳ ಪೋಲಿಸ್ ಠಾಣೆಯ ಸಹಕಾರದೊಂದಿಗೆ ‘ನಶಾ ಮುಕ್ತ ಭಾರತʼಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಆ […]

ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ

(Nitte) ನಿಟ್ಟೆ : ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನ ವಿರೋಧಿ ಸಮಿತಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೇಂಜರ್ಸ್‌ ಮತ್ತು ರೋವರ್ಸ್‌ ಘಟಕ,   ಯೂತ್ ರೆಡ್ ಕ್ರಾಸ್ ಸೊಸೈಟಿ ಸಹಯೋಗದಲ್ಲಿ ಕಾರ್ಕಳ ಪೋಲಿಸ್ ಠಾಣೆಯ ಸಹಕಾರದೊಂದಿಗೆ ‘ನಶಾ ಮುಕ್ತ ಭಾರತʼಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಆ ಪ್ರಯುಕ್ತ ಬೀದಿ ನಾಟಕ ಮತ್ತು ಜಾಥಾ ಆಯೋಜನೆಯ ಮೂಲಕ ಸಾರ್ವಜನಿಕ ಜಾಗೃತಿ  ಮೂಡಿಸಲಾಯಿತು.

ನಶಾ ಮುಕ್ತ ಭಾರತ ಅಭಿಯಾನದ ಕುರಿತು ಜಾಗೃತಿ  ಮೂಡಿಸಲು ಕಾರ್ಯಕ್ರಮಕ್ಕೆ ಕಾರ್ಕಳ  ಪೋಲೀಸ್ ಠಾಣಾಧಿಕಾರಿ  ಪ್ರಸನ್ನ ಎಂ. ಎಸ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಅವರು ಮಾತನಾಡಿ, ನಶಾ ಮುಕ್ತ ಭಾರತವನ್ನು ನಿರ್ಮಿಸುವಲ್ಲಿ ವಿದ್ಯಾರ್ಥಿಗಳ  ಜವಾಬ್ಧಾರಿ ಹೆಚ್ಚಿದೆ. ಭಾರತದಲ್ಲಿ ದಾಖಲಾಗುವ ಮಾದಕ ವ್ಯಸನ ದೂರುಗಳಲ್ಲಿ ವಿದ್ಯಾರ್ಥಿಗಳ ಸಮೂಹ ದೊಡ್ಡದು.  ವಿದ್ಯಾರ್ಥಿಗಳು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದೇ ನಶಾ ಮುಕ್ತ ಭಾರತ ನಿರ್ಮಾಣದ ಮೊದಲ ಮೆಟ್ಟಿಲು ಎಂದು ತಿಳಿಸಿದರು.

 ವಿದ್ಯಾರ್ಥಿ ಶಕ್ತಿ ದೇಶದ ಶಕ್ತಿಆಗಬೇಕೆ ಹೊರತು ಅದು ದೇಶದ ದೌರ್ಬಲ್ಯ ಆಗಬಾರದು. ಹಾಗಾಗಿ ವಿದ್ಯಾರ್ಥಿಗಳು ದುಶ್ಚಟಗಳ ದಾಸರಾಗದೆ ಉತ್ತಮ ಸಮಾಜದ ಪಾಲುದಾರರಾಗಬೇಕು ಎಂದು ಹೇಳಿ, ಮಾದಕ ದ್ರವ್ಯ ವ್ಯಸನ ಅಪರಾಧಕ್ಕೆ ಇರುವ ಕಾನೂನು ಮತ್ತು ಶಿಕ್ಷೆಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀಮತಿ ಸುಮನ ಎಂ ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞೆ ಬೋಧಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕಿರು ನಾಟಕಗಳ ಮೂಲಕ ಜಾಗೃತಿ ಮೂಡಿಸಿದರು. 

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಕಾರ್ಕಳ ಪೋಲಿಸ್ ಠಾಣಾ ಅಧಿಕಾರಿ  ಪ್ರಸನ್ನ ಎಂ.ಎಸ್ ಅವರೊಂದಿಗೆ ಸಾರ್ವಜನಿಕ ಜಾಗೃತಿಗಾಗಿ ಕಾಲೇಜಿನಿಂದ ನಿಟ್ಟೆ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆ ಜಾಥವನ್ನು ನಡೆಸಿದರು.

ಸಭಾ  ಕಾರ್ಯಕ್ರಮದಲ್ಲಿ ಕಾರ್ಕಳ ಪೋಲಿಸ್ ಠಾಣೆಯ  ರುದ್ರೇಶ್, ರೇಂಜರ್ಸ್‌ ಮತ್ತು ರೋವರ್ಸ್‌ ಘಟಕದ ಸಂಯೋಜಕರಾದ ಪ್ರಕಾಶ್, ಯೂತ್ ರೆಡ್ ಕ್ರಾಸ್ ಸೊಸೈಟಿ ಸಂಯೋಜಕಿ  ರಶ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನ ಅಧಿಕಾರಿ ನಮಿರಾಜ್ ಸ್ವಾಗತಿಸಿದರು. ವಿದ್ಯಾರ್ಥಿನಿ ಕುಮಾರಿ ಮಧುರಾ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.