• Home  
  • ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ Teacher’s Day Celebration by Malabar Gold and Diamonds
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ Teacher’s Day Celebration by Malabar Gold and Diamonds

Share: ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಕೆ (Udupi) ಉಡುಪಿ: ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕರ ದಿನಾಚರಣೆಯನ್ನು ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು.   ಮಣೂರು ಪಡುಕೆರೆ  ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡೆನೀಸ್ ಬಾಂಜಿ, ಹೆಬ್ರಿ-ಕಚ್ಚೂರು ಸರಕಾರಿ […]

(Udupi) ಉಡುಪಿ: ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಶಿಕ್ಷಕರ ದಿನಾಚರಣೆಯನ್ನು ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು.

  ಮಣೂರು ಪಡುಕೆರೆ  ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡೆನೀಸ್ ಬಾಂಜಿ, ಹೆಬ್ರಿ-ಕಚ್ಚೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಜಯ ಶೆಟ್ಟಿ, ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಧ್ಯಾಪಕರಾದ ಮೋಹಿದ್ದಿನ್, ಕೊಕ್ಕರ್ಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಶೆಟ್ಟಿ, ಕಟಪಾಡಿ ಎಸ್ ವಿಎಸ್ ಕಾಲೇಜಿನ ಪ್ರಾಂಶುಪಾಲ‌ ಡಾ. ದಯಾನಂದ ಪೈ, ಬೈಲೂರು ನಚಿಕೇತ ವಿದ್ಯಾಲಯ ಅಮೃತ ಭಾರತಿ ಸಂಸ್ಥೆಯ ಅಧ್ಯಾಪಕಿ ಕೃಷ್ಟಿಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

 ಇದೇ ಸಂದರ್ಭದಲ್ಲಿ ಭರತನಾಟ್ಯದಲ್ಲಿ  ಗೋಲ್ಡನ್  ಬುಕ್ ಆಫ್ ರೆಕಾರ್ಡ ಸಾಧನೆ ಮಾಡಿರುವ ವಿದುಷಿ ದೀಕ್ಷಾ ಅವರನ್ನು ಸನ್ಮಾನಿಸಲಾಯಿತು.  

  ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್  ರೈ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗೀತಾಂಜಲಿ ಸುವರ್ಣ, ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಯೋಗಿಶ್ ಕೊಟ್ಯಾನ್, ಡಾ. ಚರಿಷ್ಮಾ ಶೆಟ್ಟಿ, ಮಲಬಾರ್ ಗೊಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಜ್ ರೆಹಮಾನ್,  ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಮಾರುಕಟ್ಟೆ ವ್ಯವಸ್ಥಾಪಕರಾದ ತಂಝಿಮ್ ಶಿರ್ವ ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 ವಿದ್ಯಾ ಸರಸ್ವತಿ ಪ್ರಾಸ್ತಾವಿಕ ಮಾತನಾಡಿದರು.

  ನಿತ್ಯಾನಂದ್, ಯಾಸೀರ್, ದಿವ್ಯ, ಫಾರೂಕ್, ನಿಕಿತಾ ಶಿಕ್ಷಕರನ್ನು ಪರಿಚಯಿಸಿದರು.

 ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಸಿಬ್ಬಂದಿ ವಿಘ್ನೇಶ್ ನಿರೂಪಿಸಿ, ಸ್ವಾಗತಿಸಿದರು. ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್ ವಂದಿಸಿದರು. 

Leave a comment

Your email address will not be published. Required fields are marked *

eMedia Kannada  @2025. All Rights Reserved.