• Home  
  • ಪಲಿಮಾರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ (Wellness program at Palimar Gvt. College)
- ಶಾಲಾ ಕಾಲೇಜು - ಸಂಘ, ಸಂಸ್ಥೆಗಳು

ಪಲಿಮಾರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ (Wellness program at Palimar Gvt. College)

Share: ಪಲಿಮಾರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜನೆ (Palimaru) ಪಲಿಮಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರಿನಲ್ಲಿ ಆಯೋಜಿಸಲಾಯಿತು.     ಕಾರ್ಯಕ್ರಮವನ್ನು ಪಡುಬಿದ್ರಿ ಠಾಣೆಯ ಉಪನಿರೀಕ್ಷಕರಾದ ಸಕ್ತಿವೇಲು ಉದ್ಘಾಟಿಸಿದರು.     ಈ ಸಂದರ್ಭ ಮಾತನಾಡಿದ ಅವರು, ಶಿಕ್ಷಣ ಪಡೆಯುವ ಹಂತದಲ್ಲಿ ಸಾಧನೆಯ ಕಡೆಗೆ ಗಮನವಿರಬೇಕು. ಮಕ್ಕಳು ಮಾದಕ ದ್ರವ್ಯ ಸೇವನೆಗೆ ಬಲಿಯಾಗಬಾರದು. […]

(Palimaru) ಪಲಿಮಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರಿನಲ್ಲಿ ಆಯೋಜಿಸಲಾಯಿತು.

    ಕಾರ್ಯಕ್ರಮವನ್ನು ಪಡುಬಿದ್ರಿ ಠಾಣೆಯ ಉಪನಿರೀಕ್ಷಕರಾದ ಸಕ್ತಿವೇಲು ಉದ್ಘಾಟಿಸಿದರು.

    ಈ ಸಂದರ್ಭ ಮಾತನಾಡಿದ ಅವರು, ಶಿಕ್ಷಣ ಪಡೆಯುವ ಹಂತದಲ್ಲಿ ಸಾಧನೆಯ ಕಡೆಗೆ ಗಮನವಿರಬೇಕು. ಮಕ್ಕಳು ಮಾದಕ ದ್ರವ್ಯ ಸೇವನೆಗೆ ಬಲಿಯಾಗಬಾರದು. ಖಿನ್ನತೆ, ಆತ್ಮಹತ್ಯೆಗೆ ಶರಣಾಗುವುದರಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತದೆ ಎಂದು ಹೇಳಿದರು.

    ಈ ಸಂದರ್ಭ ಪಲಿಮಾರು ಸರಕಾರಿ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕ ಮಾಧವ ಸಾಲ್ಯಾನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಲಿಮಾರು ಒಕ್ಕೂಟದ ಅಧ್ಯಕ್ಷೆ ಆಶಾ ಮತ್ತಿತರರು ಉಪಸ್ಥಿತರಿದ್ದರು.

   ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಪ್ರಾಂಶುಪಾಲೆ ಗ್ರೆಟ್ಟಾ ಮೊರಸ್ ಸ್ವಾಗತಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಡುಬಿದ್ರಿ ವಲಯ ಮೇಲ್ವಿಚಾರಕಿ ಸರಿತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಸುಶ್ಮಿತಾ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.