ಶ್ರೀ ಪೇಜಾವರ ಶ್ರೀ ಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ, ಖಾವಂದರೊಂದಿಗೆ ಚರ್ಚೆ
ಮಂಜುನಾಥನ ದರ್ಶನ ಪಡೆದ ಪೇಜಾವರ ಶ್ರೀ
(Dharmasthala) ಧರ್ಮಸ್ಥಳ : ಪೇಜಾವರ ಮಠದ ಶ್ರೀಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗುರುವಾರ ಅಪರಾಹ್ನ ಶ್ರೀ ಕ್ಷೇತ್ರ ದರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಪ್ರಸಕ್ತ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸಮಾಲೋಚನೆ ನಡೆಸಿ, ಅವರಿಗೆ ತಮ್ಮ ಬೆಂಬಲ ಸೂಚಿಸಿ, ಶ್ರೀ ಕೃಷ್ಣನ ಅನುಗ್ರಹ ಪ್ರಸಾದ ನೀಡಿದರು.
ಶ್ರೀ ಕ್ಷೇತ್ರದ ವತಿಯಿಂದ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.

