ಭಾವಿ ಪರ್ಯಾಯ ಶೀರೂರು ಮಠಾಧೀಶ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ
ಶ್ರೀ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸಹಿತ ಭಕ್ತಿಪೂರ್ವಕ ಸ್ವಾಗತ
(Uchila) ಉಚ್ಚಿಲ : ಭಾವಿ ಪರ್ಯಾಯ ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶನಿವಾರ ಸಂಜೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಬರುವ ಪರ್ಯಾಯದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ತಿಳಿಸಿ, ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸಹಿತ ಭಕ್ತಿಪೂರ್ವಕವಾಗಿ ಸ್ವಾಗತ ಕೋರಲಾಯಿತು.
ಈ ಸಂದರ್ಭದಲ್ಲಿ ದೇವಳದ ರುವಾರಿ ನಾಡೋಜ ಡಾ. ಜಿ. ಶಂಕರ್, ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಗಿರಿಧರ ಸುವರ್ಣ, ಪ್ರಮುಖರಾದ ಗುಂಡು ಬಿ. ಅಮೀನ್, ಸುಧಾಕರ್ ಕುಂದರ್, ದಿನೇಶ್ ಎರ್ಮಾಳ್, ಮನೋಜ್ ಕಾಂಚನ್, ಶೈಲಜ ಪುತ್ರನ್, ಕಾಪು ಮಹಿಳಾ ಒಕ್ಕೂಟದ ಸದಸ್ಯೆಯರು, ದೇವಳದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

