• Home  
  •  ಗೆಳೆಯರ ಬಳಗ ಕಾರಂತ ಪುರಸ್ಕಾರ-2025 : ಕವಯತ್ರಿ ಎಚ್. ಶಕುಂತಳಾ ಭಟ್ ಆಯ್ಕೆ (Gelaeyara Balaga Karanth Award-2025: Poet H. Shakuntala Bhat selected)
- ಸನ್ಮಾನ, ಅಭಿನಂದನೆ

 ಗೆಳೆಯರ ಬಳಗ ಕಾರಂತ ಪುರಸ್ಕಾರ-2025 : ಕವಯತ್ರಿ ಎಚ್. ಶಕುಂತಳಾ ಭಟ್ ಆಯ್ಕೆ (Gelaeyara Balaga Karanth Award-2025: Poet H. Shakuntala Bhat selected)

Share:   ಗೆಳೆಯರ ಬಳಗ ಕಾರಂತ ಪುರಸ್ಕಾರ-2025 :  ಕವಯತ್ರಿ ಎಚ್. ಶಕುಂತಳಾ ಭಟ್ ಆಯ್ಕೆ      ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ನೀಡುವ ಪುರಸ್ಕಾರ    (Saligrama) ಸಾಲಿಗ್ರಾಮ : ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ , ಕಾರಂತ ಪುರಸ್ಕಾರ – 2025, ಪ್ರಶಸ್ತಿಗೆ ಈ ನಾಡಿನ ಹಿರಿಯ ಸಾಹಿತಿ, ಕಾರಂತರ […]

   (Saligrama) ಸಾಲಿಗ್ರಾಮ : ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ , ಕಾರಂತ ಪುರಸ್ಕಾರ – 2025, ಪ್ರಶಸ್ತಿಗೆ ಈ ನಾಡಿನ ಹಿರಿಯ ಸಾಹಿತಿ, ಕಾರಂತರ ಹಿತೈಷಿ, ಸಮಾಜ ಸೇವಕಿ, ಖ್ಯಾತಲೇಖಕಿ, ಸಂಘಟಕಿ, ಕವಿ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಿಂತಕಿ, ಎಚ್. ಶಕುಂತಳಾ ಭಟ್ ಆಯ್ಕೆಯಾಗಿದ್ದಾರೆ.

  ಕಥೆಗಾರರಾಗಿ  ಕವಯತ್ರಿಯಾಗಿ ಕನ್ನಡಕ್ಕೆ ಸೇವೆ ಸಲ್ಲಿಸಿದ್ದಾರೆ. 90 ಪ್ರಕಟವಾದ ಓಟ್ಟು ಗ್ರಂಥಗಳನ್ನು ಬರೆದಿದ್ದಾರೆ. ಕನ್ನಡ ಹಾಗೂ ತುಳು ಭಾಷೆಯಲ್ಲಿ ಇವರು ಸಲ್ಲಿಸಿದ ಸಾಹಿತ್ಯ ಸೇವೆ ಅಪಾರವಾಗಿದ್ದು ಇವರ ಕನ್ನಡ ಸೇವೆಯನ್ನು ಪರಿಗಣಿಸಿ ಪ್ರಸಸ್ತಿ ನೀಡಲಾಗುತ್ತಿದೆ.  

ಈ ಹಿಂದೆ ಮಾಲಿನಿ ಮಲ್ಯ, ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ವೈದೇಹಿ, ಹಾಗೂ ಡಾ. ನಾ ಮೊಗಸಾಲೆಯವರು ಗೆಳೆಯರ ಬಳಗ ಕಾರಂತ ಪುರಸ್ಕಾರ ಪಡೆದವರಾಗಿದ್ದಾರೆ.

   ಈ ಪುರಸ್ಕಾರವು ಗೌರವಧನ ಹಾಗೂ ಸನ್ಮಾನ ಪತ್ರ, ಫಲಪುಷ್ಪ, ಶಾಲು ಇತ್ಯಾದಿಯಿಂದ ಕೂಡಿರುತ್ತದೆ.

   ಪ್ರಶಸ್ತಿ ಪ್ರದಾನ ಸಮಾರಂಭವು ಅಕ್ಟೋಬರ್ 17 ರ ಶುಕ್ರವಾರ ಸಂಜೆ ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.

 ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರುವರು ಎಂದು   ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.