• Home  
  • ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ; ಉಚಿತ ರಿಕ್ಷಾ ಪ್ರಮಾಣಕ್ಕೆ ಶಾಸಕರಿಂದ ಚಾಲನೆ (Prime Minister Narendra Modi Birthday Celebration; MLAs drive for free rickshaws)
- social service

ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ; ಉಚಿತ ರಿಕ್ಷಾ ಪ್ರಮಾಣಕ್ಕೆ ಶಾಸಕರಿಂದ ಚಾಲನೆ (Prime Minister Narendra Modi Birthday Celebration; MLAs drive for free rickshaws)

Share: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ; ಉಚಿತ ರಿಕ್ಷಾ ಪ್ರಮಾಣಕ್ಕೆ ಶಾಸಕರಿಂದ ಚಾಲನೆ ಚಂದ್ರ ಮಲ್ಲಾರು ಮತ್ತು ನಜೀರ್ ರವರಿಂದ ಉಚಿತ ರಿಕ್ಷಾ ಸೇವೆ  (Kaup) ಕಾಪು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಪ್ರಯುಕ್ತ ಉಚಿತ ರಿಕ್ಷಾ ಪ್ರಯಾಣಕ್ಕೆ ಇಂದು ಬೆಳಿಗ್ಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಪೇಟೆ ಬಳಿ ಚಾಲನೆ ನೀಡಿದರು.     ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಎಸ್.ಸಿ ಮೋರ್ಚಾದ ಮಾಜಿ ಅಧ್ಯಕ್ಷ […]

 (Kaup) ಕಾಪು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಪ್ರಯುಕ್ತ ಉಚಿತ ರಿಕ್ಷಾ ಪ್ರಯಾಣಕ್ಕೆ ಇಂದು ಬೆಳಿಗ್ಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಪೇಟೆ ಬಳಿ ಚಾಲನೆ ನೀಡಿದರು.

    ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಎಸ್.ಸಿ ಮೋರ್ಚಾದ ಮಾಜಿ ಅಧ್ಯಕ್ಷ  ಚಂದ್ರ ಮಲ್ಲಾರ್ ಇವರು ಸುಮಾರು 10 ವರ್ಷಗಳಿಂದ ಹಾಗೂ ಕಾಪು ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ನಜೀರ್ ಇವರು ಕಳೆದ 3 ವರ್ಷಗಳಿಂದ ಉಚಿತ ರಿಕ್ಷಾ ಪ್ರಮಾಣ ಸೇವೆ ನೀಡುತ್ತಾ ಬಂದಿರುತ್ತಾರೆ ಇವರನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು.

    ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ  ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ  ಗೋಪಾಲಕೃಷ್ಣ ರಾವ್, ಕಾಪು ಪುರಸಭೆಯ ಸದಸ್ಯರು, ಜನಪ್ರತಿನಿಧಿಗಳು, ಮಂಡಲ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ 75ನೇ ಜನ್ಮದಿನ ಪ್ರಯುಕ್ತ ಇಂದು ದಿನಾಂಕ 17-09-2025 ರಂದು ನಡೆದ ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.