• Home  
  • ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  ನವರಾತ್ರಿ ಮಹೋತ್ಸವಕ್ಕೆ ಚಾಲನೆ (Dodnagudde Shree Durga Adishakti Kshetra Navratri Mahotsav begins)
- ಧಾರ್ಮಿಕ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  ನವರಾತ್ರಿ ಮಹೋತ್ಸವಕ್ಕೆ ಚಾಲನೆ (Dodnagudde Shree Durga Adishakti Kshetra Navratri Mahotsav begins)

Share: ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  ನವರಾತ್ರಿ ಮಹೋತ್ಸವಕ್ಕೆ ಚಾಲನೆ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ (Udupi) ಉಡುಪಿ : ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗಣೇಶ ಸರಳಾಯ, ವಿ ವಿಖ್ಯಾತ್ ಭಟ್ ಅವರ ಪೌರೋಹಿತ್ಯದಲ್ಲಿ ನವರಾತ್ರಿಯ ಪ್ರಥಮ ದಿನ ಸೋಮವಾರ ಕದಿರು ಕಟ್ಟುವಿಕೆಯಿಂದ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.   ಪ್ರಾತಃಕಾಲ ಮಂಗಳವಾದ್ಯ ಸಹಿತ ಕದಿರನ್ನು […]

(Udupi) ಉಡುಪಿ : ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗಣೇಶ ಸರಳಾಯ, ವಿ ವಿಖ್ಯಾತ್ ಭಟ್ ಅವರ ಪೌರೋಹಿತ್ಯದಲ್ಲಿ ನವರಾತ್ರಿಯ ಪ್ರಥಮ ದಿನ ಸೋಮವಾರ ಕದಿರು ಕಟ್ಟುವಿಕೆಯಿಂದ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

  ಪ್ರಾತಃಕಾಲ ಮಂಗಳವಾದ್ಯ ಸಹಿತ ಕದಿರನ್ನು ಬರಮಾಡಿಕೊಳ್ಳಲಾಯಿತು. ಪೂಜೆ ನೆರವೇರಿಸಿ ಸಾನಿಧ್ಯದಲ್ಲಿ ಕದಿರು ಕಟ್ಟಲಾಯಿತು. ಕ್ಷೇತ್ರದ ವತಿಯಿಂದ ಬಂದ ಭಕ್ತರಿಗೆ ಕದಿರನ್ನು ವಿತರಿಸಲಾಯಿತು.

   ಧಾರ್ಮಿಕ ಕಾರ್ಯಕ್ರಮವಾಗಿ ಆದ್ಯ ಗಣಪತಿಯಾಗ, ನವಕ ಕಲಶ ಪ್ರಧಾನ ಹೋಮ, ಕಲಶಾಭಿಷೇಕ ನೆರವೇರಿತು. ಸುಕ್ಷಿತ್ ಮತ್ತು ರಶ್ಮಿ ದಂಪತಿ ಹಾಗೂ ವಿಘ್ನೇಶ್ ಕೊಕ್ಕರ್ಣೆ ಮತ್ತು ಮನೆಯವರಿಂದ ಚಂಡಿಕಾಯಾಗಗಳು, ಶಾಂತಾ ಮತ್ತು ಮನೆಯವರಿಂದ ದುರ್ಗಾ ನಮಸ್ಕಾರ ಪೂಜೆ, ಶ್ರೀರಂಗಪೂಜೆ ನೆರವೇರಿತು.

   ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿವಿಧ ಆರಾಧನೆ, ಪೂಜೆಗಳು ನೆರವೇರಿದವು.

  ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಾಕಷ್ಟು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

   ಶ್ರೀ ದುರ್ಗಾ ಆದಿಶಕ್ತಿದೇವಿಗೆ ಅಭಿಮುಖವಾಗಿ ಮಧ್ಯಾಹ್ನ ಶರಣ್ಯಾ, ಶ್ರೇಷ್ಠಾ, ಶ್ರೇಯಾ ಆಚಾರ್ಯ ಮತ್ತು ವಿ ಸುಮಲತಾ ಅವರ ಶಿಷ್ಯೆಯರಿಂದ ಹಾಗೂ ರಾತ್ರಿ ಸ್ವದಾ ಭಟ್ ಅವರಿಂದ ನೃತ್ಯ ಸೇವೆ ಸಮರ್ಪಿಸಿದರು.

    ನವಶಕ್ತಿ ವೇದಿಕೆಯಲ್ಲಿ ಪ್ರಜ್ಞಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿ ನಡೆಯಿತು.

  ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ಉಪಸ್ಥಿತರಿದ್ದರು.

   ಅನ್ನಸಂತರ್ಪಣೆಗೆ ಚಾಲನೆ

ಕ್ಷೇತ್ರದಲ್ಲಿ ನಿರಂತರವಾಗಿ 10 ದಿನಗಳ ಕಾಲ ನೆರವೇರಲಿರುವ ಅನ್ನಸಂತರ್ಪಣೆಗೆ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರು ನೆರೆದ ಭಕ್ತರಿಗೆ ಅನ್ನ ಮತ್ತು ಸಾರು ಬಡಿಸುವುದರ ಮೂಲಕ ಚಾಲನೆ ನೀಡಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.