ಸೆ. 28 : ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಬೃಹತ್ ಉಚಿತ ಹೃದ್ರೋಗ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಉಚಿತ ಶಿಬಿರ
(Udupi) ಉಡುಪಿ: ವಿಶ್ವ ಹೃದಯ ದಿನದ ಅಂಗವಾಗಿ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಸೆ. 28 (ಭಾನುವಾರ) ಬೃಹತ್ ಉಚಿತ ಹೃದ್ರೋಗ ತಪಾಸಣಾ ಶಿಬಿರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:00ರವರೆಗೆ ನಡೆಯಲಿದೆ ಎಂದು ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ. ಎಸ್. ಚಂದ್ರಶೇಖರ್ ತಿಳಿಸಿದ್ದಾರೆ.
ಹೃದ್ರೋಗ ತಜ್ಞರಾದ ಡಾ. ಶ್ರೀಕಾಂತ ಕೃಷ್ಣ, ಡಾ. ವಿಶು ಕುಮಾರ ಬಿ ಮತ್ತು ಡಾ. ಸುಹಾಸ್ ಜಿ ಸಿ ಇವರ ನೇತೃತ್ವದಲ್ಲಿ ಬೃಹತ್ ಉಚಿತ ಹೃದ್ರೋಗ ತಪಾಸಣಾ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ಭಾಗವಹಿಸಿದ ರೋಗಿಗಳಿಗೆ ಹೃದ್ರೋಗ ತಜ್ಞರಿಂದ ಉಚಿತ ತಪಾಸಣೆ, ರಕ್ತದ ಸಕ್ಕರೆ ಅಂಶದ ಪರೀಕ್ಷೆ, ರಕ್ತದ ಕೊಬ್ಬಿನಾoಶದ ಪರೀಕ್ಷೆ ಹಾಗೂ ಇ. ಸಿ. ಜಿ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು.
ಹೃದ್ರೋಗ ತಜ್ಞರ ಸಲಹೆಯ ಮೇರೆಗೆ ಹೃದಯದ ಸ್ಕ್ಯಾನಿಂಗ್ (ECHO) ಟಿ. ಎಂ. ಟಿ ಪರೀಕ್ಷೇಗಳನ್ನು ಉಚಿತವಾಗಿ ಮಾಡಲಾಗುವುದು. ಹೃದಯದ ಆಂಜಿಯೋಗ್ರಾಮ್ ಪರೀಕ್ಷೆಯನ್ನು ಶೇಕಡಾ 20% ರ ರಿಯಾಯಿತಿ ದರದಲ್ಲಿ ಹಾಗೂ ಹೃದಯದ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯನ್ನು ಶೇ 10% ರ ರಿಯಾಯಿತಿ ದರದಲ್ಲಿ ಮಾಡಲಾಗುವುದು.
ದಿನಾಂಕ ಸೆ ಸೋಮವಾರ ದಿಂದ ದಿನಾಂಕ 11-10-2025 ರವರೆಗೆ ಈ ಕೆಳಗಿನ ಪರೀಕ್ಷೆಗಳನ್ನು ಉಚಿತವಾಗಿ ಹಾಗೂ ರಿಯಾಯಿತಿ ದರದಲ್ಲಿ ಮಾಡಲಾಗುವುದು.
ಉಚಿತ ಪರೀಕ್ಷೆಗಳು : ರಕ್ತದ ಸಕ್ಕರೆ ಅಂಶ ಪರೀಕ್ಷೆ, ರಕ್ತದ ಕೊಬ್ಬಿನಾoಶದ ಪರೀಕ್ಷೆ ಹಾಗೂ ಇ ಸಿ ಜಿ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು.
ಹೃದಯದ ಆಂಜಿಯೋಗ್ರಾಮ್ ಪರೀಕ್ಷೆಯನ್ನು ಶೇಕಡಾ 20% ರ ರಿಯಾಯಿತಿ ದರದಲ್ಲಿ ಹಾಗೂ ಹೃದಯದ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯನ್ನು ಶೇ 10% ರ ರಿಯಾಯಿತಿ ದರದಲ್ಲಿ ಮಾಡಲಾಗುವುದು.
ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಭಾಗವಹಿಸಿ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಡಾ. ಜಿ. ಎಸ್. ಚಂದ್ರಶೇಖರ್ ತಿಳಿಸಿದ್ದಾರೆ.

