ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗಾಂಧಿ ಜಯಂತಿ ಆಚರಣೆ
ಕಾಪು ಯೋಜನಾ ಕಛೇರಿಯಲ್ಲಿ ಮಹಾತ್ಮಾ ಗಾಂಧಿ ಭಾವ ಚಿತ್ರಕ್ಕೆ ಪುಷ್ಪ ನಮನ
(Kaup) ಕಾಪು : ಮಹಾತ್ಮಾ ಗಾಂಧಿಜಿಯವರ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ಯಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭ ಕೇಂದ್ರ ಸಮಿತಿಯ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಕಾಪು ಒಕ್ಕೂಟದ ಅಧ್ಯಕ್ಷ ಯೋಗೀಶ್ ಆಚಾರ್ಯ, ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

