• Home  
  • ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಪದ ಪ್ರದಾನ (Beltangady Taluk Civil Engineers Association)
- ವ್ಯವಹಾರ - ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಪದ ಪ್ರದಾನ (Beltangady Taluk Civil Engineers Association)

Share: ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಪದ ಪ್ರದಾನ ಸಂಸ್ಥೆಯ ವತಿಯಿಂದ ಮುಲ್ಕಿ ಜೀವನ್ ಕೆ ಶೆಟ್ಟಿಯವರನ್ನು ಗೌರವಿಸಲಾಯಿತು  (Belthangadi) ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ಸಾಲಿನ ಪದ ಪ್ರದಾನ ಸಮಾರಂಭ ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಜರಗಿತು.    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮುಲ್ಕಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್‌ ಅಧ್ಯಕ್ಷ ಮುಲ್ಕಿ ಜೀವನ್ ಕೆ ಶೆಟ್ಟಿ ಮಾತನಾಡಿ, ಬೆಳ್ತಂಗಡಿ  ಇಂಜಿನಿಯರ್ ಅಸೋಸಿಯೇಷನ್ ಸಾಮಾಜಿಕ ಕಾರ್ಯಕ್ರಮಗಳ ಜೊತೆಗೆ ಶೈಕ್ಷಣಿಕ ಸಹಾಯ […]

 (Belthangadi) ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ಸಾಲಿನ ಪದ ಪ್ರದಾನ ಸಮಾರಂಭ ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಜರಗಿತು.

   ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮುಲ್ಕಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್‌ ಅಧ್ಯಕ್ಷ ಮುಲ್ಕಿ ಜೀವನ್ ಕೆ ಶೆಟ್ಟಿ ಮಾತನಾಡಿ, ಬೆಳ್ತಂಗಡಿ  ಇಂಜಿನಿಯರ್ ಅಸೋಸಿಯೇಷನ್ ಸಾಮಾಜಿಕ ಕಾರ್ಯಕ್ರಮಗಳ ಜೊತೆಗೆ ಶೈಕ್ಷಣಿಕ ಸಹಾಯ ಹಸ್ತದ ಮೂಲಕ ಉತ್ತಮ ಸಾಧನೆ ಮಾಡಿದೆ. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಸಿವಿಲ್ ಅಸೋಸಿಯೇಷನ್ ಸೆಂಟರ್ ಇದೆ. ವಿದ್ಯೆಯ ಜೊತೆಗೆ ಸಾಮಾಜಿಕ ಜವಾಬ್ದಾರಿ, ಸಮಾಜಕ್ಕೆ ಕೊಡಬೇಕಾದ ಕೊಡುಗೆಯನ್ನು ನೀಡುತ್ತಾ ಬಂದರೆ ನಮ್ಮ ವಿದ್ಯೆಗೆ ಗೌರವ ಕೊಟ್ಟಂತಾಗುತ್ತದೆ.

    ಎಸೋಸಿಯೇಷನ್ ಸದಸ್ಯರು ಒಗ್ಗಟ್ಟಾದರೆ ಮಾತ್ರ ಸರ್ಕಾರದಿಂದ ಸಿಗುವ ಸವಲತ್ತುಗಳು ಸಿಗಲು ಸಾಧ್ಯ. ಎಸೋಸಿಯೇಷನ್ ಸದಸ್ಯರು ಸುರೇಶ್ ಬಂಗೇರ ಅಧ್ಯಕ್ಷತೆಯಲ್ಲಿ  ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.

    ಇದೇ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ವತಿಯಿಂದ ಮುಲ್ಕಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್‌ ಅಧ್ಯಕ್ಷ ಹಾಗೂ ಶಾರದಾ ಶಾರದಾ ಎಸೋಸಿಯೇಟ್ಸ್ ನ ಮುಲ್ಕಿ ಜೀವನ್ ಕೆ ಶೆಟ್ಟಿ ರವರನ್ನು ಗೌರವಿಸಲಾಯಿತು.

    ಎನ್ಐಟಿಕೆ ಕಾಲೇಜಿನ ನಿವೃತ್ತ ಪ್ರೊಫೆಸರ್ ಕೆಎಸ್ ಬಾಬು ನಾರಾಯಣ, ಬೆಳ್ತಂಗಡಿ ಇಂಜಿನಿಯರ್ ಎಸೋಸಿಯೇಷನ್ ನಿಕಟ ಪೂರ್ವ ಅಧ್ಯಕ್ಷ ಜಗದೀಶ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.