• Home  
  • ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ (Narendra Modi visits Udupi Srikrishna Mutt on November 28)
- ಧಾರ್ಮಿಕ

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ (Narendra Modi visits Udupi Srikrishna Mutt on November 28)

Share: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ “ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ” ದಲ್ಲಿ ಮೋದಿ ಭಾಗಿ ಆಗಲಿದ್ದಾರೆ (Udupi) ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು (ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.     ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ […]

(Udupi) ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು (ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.

    ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

    ಗೀತಾ ಜಯಂತಿಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ “ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ” ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.

    ಕಾರ್ಯಕ್ರಮಕ್ಕೆ ಆಗಮಿಸುವ ಬಗ್ಗೆ ಪ್ರಧಾನಿ ಕಚೇರಿ ದೃಢಪಡಿಸಿದ್ದು, ಈಗಾಗಲೇ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಠದ ಮೂಲಗಳು ತಿಳಿಸಿವೆ.

    ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿ,  ಪೊಡವಿಗೊಡೆಯನ ಸನ್ನಿಧಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ ಜಗಮೆಚ್ಚಿದ ನಾಯಕ ಪ್ರಧಾನಿ ನರೇಂದ್ರ ಮೋದಿಜೀ. ಗುಜರಾತ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪುತ್ತಿಗೆ ಶ್ರೀಗಳ ತೃತೀಯ ಪರ್ಯಾಯದ ಸಂದರ್ಭದಲ್ಲಿ ಆಗಮಿಸಿದ್ದ ಮೋದಿಯವರು ಈಗ ಚತುರ್ಥ ಪರ್ಯಾಯದ ಸಂದರ್ಭದಲ್ಲಿ ನವೆಂಬರ್ 28ರಂದು ನಡೆಯುವ ಭಗವದ್‌ಕಾರ್ಯ “ಲಕ್ಷಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ” ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಸಂಸದನ ನೆಲೆಯಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ಉಡುಪಿಗೆ ಆಗಮಿಸುವಂತೆ ಮನವಿ ಮಾಡಿದ್ದು, ಪುತ್ತಿಗೆ ಪರ್ಯಾಯ ಶ್ರೀಗಳೂ ಮೋದಿಯವರಿಗೆ ಪತ್ರ ಬರೆದು ಆಹ್ವಾನಿಸಿದ್ದರು.

    ಮೋದಿಯವರ ಭೇಟಿ ನಮ್ಮ ನಾಡಿಗೆ ಮತ್ತೊಮ್ಮೆ ಹೊಸ ಚೈತನ್ಯ ತರುತ್ತಿದೆ. ತುಳುನಾಡು ಸೇರಿದಂತೆ ಇಡಿಯ ಕರ್ನಾಟಕ ಮೋದಿಜೀ ಆಗಮನವನ್ನು ಎದುರು ನೋಡುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.