• Home  
  • ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಸ.ಪ. ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ (Comprehensive award for girls’ College in district level sports meet)
- ಕ್ರೀಡೆ - ಸನ್ಮಾನ, ಅಭಿನಂದನೆ

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಸ.ಪ. ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ (Comprehensive award for girls’ College in district level sports meet)

Share: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಸ.ಪ. ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ ಹೃತ್ಪೂರ್ವಕವಾಗಿ ಅಭಿನಂದಿಸಿದ ಪ್ರಾಂಶುಪಾಲರು ಮತ್ತು ಶಿಕ್ಷಣ ಸೇವಾ ಸಮಿತಿಯವರು (Udupi) ಉಡುಪಿ: ಮಹಾತ್ಮಾ ಗಾಂಧಿ ಕ್ರೀಡಾಂಗಣ, ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ದಾಖಲೆ ಮಾಡುವುದರೊಂದಿಗೆ ಸಮಗ್ರ ಚಾಂಪಿಯನ್ ಗಳಾಗಿ ಹೊರಹೊಮ್ಮಿದ್ದಾರೆ.    ಪ್ರಥಮ ಪಿ. ಯು. ವಿದ್ಯಾರ್ಥಿನಿ ಪೂರ್ಣಿಮಾ ಉದ್ದ ಜಿಗಿತದಲ್ಲಿ ದ್ವಿತೀಯ, ತ್ರಿವಿಧ ಜಿಗಿತದಲ್ಲಿ ಪ್ರಥಮ ಹಾಗೂ 200ಮೀ. ಓಟದಲ್ಲಿ […]

(Udupi) ಉಡುಪಿ: ಮಹಾತ್ಮಾ ಗಾಂಧಿ ಕ್ರೀಡಾಂಗಣ, ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ದಾಖಲೆ ಮಾಡುವುದರೊಂದಿಗೆ ಸಮಗ್ರ ಚಾಂಪಿಯನ್ ಗಳಾಗಿ ಹೊರಹೊಮ್ಮಿದ್ದಾರೆ.

   ಪ್ರಥಮ ಪಿ. ಯು. ವಿದ್ಯಾರ್ಥಿನಿ ಪೂರ್ಣಿಮಾ ಉದ್ದ ಜಿಗಿತದಲ್ಲಿ ದ್ವಿತೀಯ, ತ್ರಿವಿಧ ಜಿಗಿತದಲ್ಲಿ ಪ್ರಥಮ ಹಾಗೂ 200ಮೀ. ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

   ಮಾನ್ಯ ಆರ್ 400ಮೀ ಹರ್ಡಲ್ಸ್ ನಲ್ಲಿ ಪ್ರಥಮ, 400ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಅನನ್ಯ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ, ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದರೆ, ನಿಖಿತಾ 800ಮೀ ಮತ್ತು 400ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

    ಜಯಲಕ್ಷ್ಮಿ 3000ಮೀ ಓಟದಲ್ಲಿ ದ್ವಿತೀಯ, 1500ಮೀ ಮತ್ತು 800ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ರಕ್ಷಿತಾ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಅಶ್ವಿನಿ 200ಮೀ ಓಟದಲ್ಲಿ ದ್ವಿತೀಯ ಸ್ಥಾನ, ನೈಮಿಷ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

    ಪೂರ್ಣಿಮಾ, ಮಾನ್ಯ ಆರ್, ನಿಖಿತಾ, ಜಯಲಕ್ಷ್ಮಿ ಮತ್ತು ಅಶ್ವಿನಿ ಅವರನ್ನೊಳಗೊಂಡ ರಿಲೇ ತಂಡ 4×100 ಹಾಗೂ 4×400 ಮೀ ರಿಲೇಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

    ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿ ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವ ತಂಡವನ್ನು ಪ್ರಾಂಶುಪಾಲರು ಮತ್ತು ಶಿಕ್ಷಣ ಸೇವಾ ಸಮಿತಿಯವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.