• Home  
  • ಬ್ರಹ್ಮಾವರ ಎಸ್‌ಕೆಪಿಎ ಬೆಳ್ಳಿ ಹಬ್ಬಕ್ಕೆ ಚಾಲನೆ (Brahmavar SKPA Silver Jubilee Celebrations Kick Off)
- ಸಂಘ, ಸಂಸ್ಥೆಗಳು

ಬ್ರಹ್ಮಾವರ ಎಸ್‌ಕೆಪಿಎ ಬೆಳ್ಳಿ ಹಬ್ಬಕ್ಕೆ ಚಾಲನೆ (Brahmavar SKPA Silver Jubilee Celebrations Kick Off)

Share: ಬ್ರಹ್ಮಾವರ ಎಸ್‌ಕೆಪಿಎ ಬೆಳ್ಳಿ ಹಬ್ಬಕ್ಕೆ ಚಾಲನೆ ಮಕ್ಕಳ ದಿನಾಚರಣೆ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ (Brahmavara) ಬ್ರಹ್ಮಾವರ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ, ಬ್ರಹ್ಮಾವರ ವಲಯದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಮತ್ತು ಬ್ರಹ್ಮಾವರ ವಲಯದ ರಜತ ಪರ್ವ ಬೆಳ್ಳಿ ಹಬ್ಬದ ಉದ್ಘಾಟನಾ ಸಮಾರಂಭ ಬ್ರಹ್ಮಾವರ ಬಂಟರ ಭವನದಲ್ಲಿ ನಡೆಯಿತು.     ಸೌತ್ ಕೆನರಾ ಫೋಟೋಗ್ರಾಫರ್ಸ್ […]

(Brahmavara) ಬ್ರಹ್ಮಾವರ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ, ಬ್ರಹ್ಮಾವರ ವಲಯದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಮತ್ತು ಬ್ರಹ್ಮಾವರ ವಲಯದ ರಜತ ಪರ್ವ ಬೆಳ್ಳಿ ಹಬ್ಬದ ಉದ್ಘಾಟನಾ ಸಮಾರಂಭ ಬ್ರಹ್ಮಾವರ ಬಂಟರ ಭವನದಲ್ಲಿ ನಡೆಯಿತು.

    ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ- ಉಡುಪಿ ಜಿಲ್ಲೆ ಇದರ ಅಧ್ಯಕ್ಷ ಪದ್ಮಪ್ರಸಾದ್ ಜೈನ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

   ಬ್ರಹ್ಮಾವರ ವಲಯದ ಅಧ್ಯಕ್ಷ ಆಲ್ವಿನ್ ಅಂದ್ರಾದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

   ಮುಖ್ಯ ಅತಿಥಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಬಿರ್ತಿ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು.

    ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ- ಉಡುಪಿ ಜಿಲ್ಲೆ, ಇದರ ಉಪಾಧ್ಯಕ್ಷ ರಮೇಶ್, ಬಾರ್ಕೂರು, ರೋಟರಿ ಅಧ್ಯಕ್ಷ ಗಣೇಶ್ ಶೆಟ್ಟಿ, ಜಿಲ್ಲಾ ಜೊತೆ ಕಾರ್ಯದರ್ಶಿ ಹೇರಿಕ್ ಡಿಸೋಜಾ, ಬ್ರಹ್ಮಾವರ ವಲಯದ ಪ್ರಧಾನ ಕಾರ್ಯದರ್ಶಿ ಪ್ರತೀಶ್ ಬ್ರಹ್ಮಾವರ, ಕೋಶಾಧಿಕಾರಿ ಹರೀಶ್ ತೆಕ್ಕಟ್ಟೆ, ಛಾಯಾ ಪ್ರತಿನಿಧಿ ಅಮಿತ್ ತೆಕ್ಕಟ್ಟೆ ಉಪಸ್ಥಿತರಿದ್ದರು.

    ಸ್ಪರ್ಧೆಯಲ್ಲಿ ಸಾವಿರಕ್ಕೂ ಮಿಕ್ಕಿ ಮಕ್ಕಳು ಭಾಗವಹಿಸಿದ್ದು ವಿಶೇಷವಾಗಿತ್ತು.

   ಕಾರ್ಯಕ್ರಮದಲ್ಲಿ ಬ್ರಹ್ಮಾವರ ವಲಯದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.

ಅಧ್ಯಕ್ಷ ಆಲ್ವಿನ್ ಅಂದ್ರಾದೆ ಸ್ವಾಗತಿಸಿದರು. ಶಿಕ್ಷಕ ಸುನೀಲ್ ಪಾಂಡೇಶ್ವರ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.