• Home  
  • ಉಡುಪಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ (National Library Week inaugurated in Udupi)
- ಜೀವನಶೈಲಿ - ಪ್ರಚಲಿತ

ಉಡುಪಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ (National Library Week inaugurated in Udupi)

Share: ಉಡುಪಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ ಓದುಗ ಸ್ನೇಹಿ ಗ್ರಂಥಾಲಯಗಳ ನಿರ್ಮಾಣಕ್ಕೆ ಆದ್ಯತೆ : ಬಸವರಾಜೇಂದ್ರ ಎಚ್. (Udupi) ಉಡುಪಿ : ಗ್ರಂಥಾಲಯಗಳಲ್ಲಿ ಏಕಾಗ್ರತೆಯಿಂದ ಓದಲು, ಅಧ್ಯಯನ ಮಾಡಲು ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸೌಕರ್ಯಗಳೊಂದಿಗೆ ರಾಜ್ಯದಲ್ಲಿ ಇನ್ನಷ್ಟು ಗ್ರಂಥಾಲಯಗಳನ್ನು ಆಧುನೀಕರಣಗೊಳಿಸಿ ಓದುಗರ ಸ್ನೇಹಿಯಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ಇದರ ಆಯುಕ್ತ ಬಸವರಾಜೇಂದ್ರ ಎಚ್.ಹೇಳಿದರು.    ಅವರು ಅಜ್ಜರಕಾಡು ಜಿಲ್ಲಾ ಹಾಗೂ ನಗರಕೇಂದ್ರ ಗ್ರಂಥಾಲಯದ  ಸಹಭಾಗಿತ್ವದಲ್ಲಿ ಹಮ್ಮಿಕೊಂಡ […]

(Udupi) ಉಡುಪಿ : ಗ್ರಂಥಾಲಯಗಳಲ್ಲಿ ಏಕಾಗ್ರತೆಯಿಂದ ಓದಲು, ಅಧ್ಯಯನ ಮಾಡಲು ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸೌಕರ್ಯಗಳೊಂದಿಗೆ ರಾಜ್ಯದಲ್ಲಿ ಇನ್ನಷ್ಟು ಗ್ರಂಥಾಲಯಗಳನ್ನು ಆಧುನೀಕರಣಗೊಳಿಸಿ ಓದುಗರ ಸ್ನೇಹಿಯಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ಇದರ ಆಯುಕ್ತ ಬಸವರಾಜೇಂದ್ರ ಎಚ್.ಹೇಳಿದರು.

   ಅವರು ಅಜ್ಜರಕಾಡು ಜಿಲ್ಲಾ ಹಾಗೂ ನಗರಕೇಂದ್ರ ಗ್ರಂಥಾಲಯದ  ಸಹಭಾಗಿತ್ವದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ,  ಉತ್ತಮ ಸಿಬಂದಿ ಸೇವಾ ಪುರಸ್ಕಾರ, ಉತ್ತಮ ಓದುಗ ಪ್ರಶಸ್ತಿ ಪ್ರದಾನ ಹಾಗೂ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

       ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷ  ಹಾಗೂ ಹಿರಿಯ ಸಾಹಿತಿ ವಸಂತಿ ಶೆಟ್ಟಿ ಬ್ರಹ್ಮಾವರ ಮಾತನಾಡಿ, ಉಡುಪಿಯಲ್ಲಿ ರಾಜ್ಯದಲ್ಲಿಯೇ ಅತೀ ಸುಸಜ್ಜಿತ ಗ್ರಂಥಾಲಯವಿದೆ. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು, ಅಧ್ಯಯನಕ್ಕೆ ಪೂರಕವಾದ ಸೌಲಭ್ಯವನ್ನು ಕಲ್ಪಿಸಿಕೊಡಲಾಗಿದೆ. ಇಂತಹ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಐಎಎಸ್, ಐಪಿಎಸ್‌ನಂತಹ ಅತ್ಯುನ್ನತ ಹುದ್ದೆಗೆ ಏರುವ ಕನಸು ಕಾಣಬೇಕು. ಇಂತಹ ಅತ್ಯಾಧುನಿಕ ಗ್ರಂಥಾಲಯವನ್ನು ರೂಪಿಸಲು ಶ್ರಮಿಸಿದ ಗ್ರಂಥಾಲಯ ಅಧಿಕಾರಿಗಳು, ಸಹಕರಿಸಿದ  ಅಭಿನಂದನಾರ್ಹರು ಎಂದರು.

     ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ಉಡುಪಿ ನಗರ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ನಿಕೇತನಾ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಡಾ. ಸೋಜನ್ ಕೆ.ಜಿ., ಸಮಯೋಚಿತವಾಗಿ ಮಾತನಾಡಿದರು.

 ನಗರಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ. ಸ್ವಾಗತಿಸಿದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಮಮತಾ ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯ ಮಂಗಳೂರು ಇಲ್ಲಿನ ಮುಖ್ಯ ಗ್ರಂಥಾಲಯಾಧಿಕಾರಿ ಗಾಯತ್ರಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ ಉಪಸಸ್ಥಿತರಿದ್ದರು.

 ಉತ್ತಮ ಓದುಗ ಪ್ರಶಸ್ತಿ ಪ್ರದಾನ

  ಕಾರ್ಯಕ್ರಮದಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ನಗರ ಕೇಂದ್ರ ಗ್ರಂಥಾಲಯ ಹಾಗೂ ಶಾಖಾ ಗ್ರಂಥಾಲಯಗಳಿಗೆ ಭೇಟಿ ನೀಡಿ, ಗ್ರಂಥಾಲಯದ ಸದುಪಯೋಗವನ್ನು ಪಡೆಯುತ್ತಿರುವ ಓದುಗರಾದ ಪ್ರಕಾಶ್ ಸುವರ್ಣ ಕಟಪಾಡಿ, ಸುಧಾ ಪೈ ಉಡುಪಿ, ರಾಜು ಭಂಡಾರಿ ಹಾಗೂ ಅನನ್ಯ ಸುನೀಲ್ ಅವರಿಗೆ `ಉತ್ತಮ ಓದುಗ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.