ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ
ಸುಜ್ಞಾನ ಚಾರಿಟೇಬಲ್ ಟ್ರಸ್ಟ್ ಸಮುದಾಯ ಭವನ ನಿರ್ಮಾಣಕ್ಕೆ 2 ಲಕ್ಷ ಕೊಡುಗೆ
(Kaup) ಕಾಪು : ಕಾಪು ತಾಲೂಕಿನ ಸುಜ್ಞಾನ ಚಾರಿಟೇಬಲ್ ಟ್ರಸ್ಟ್ ಇದರ ಸುಧಾಮ ಸಮುದಾಯ ಭವನ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮoಜೂರಾದ 2 ಲಕ್ಷದ ಮಂಜೂರಾತಿ ಪತ್ರದ ವಿತರಣೆ ನೆರವೇರಿತು.
ಕಾಪು ತಾಲೂಕು ಜನಜಾಗೃತಿಯ ಅಧ್ಯಕ್ಷ ದಯಾನಂದ ಹೆಜಮಾಡಿ, ಹಾಗೂ ಜಿಲ್ಲಾ ಸದಸ್ಯ ಇನ್ನಾ ಉದಯ ಕುಮಾರ್ ಶೆಟ್ಟಿ ಹಾಗೂ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿಯವರು ಸುಜ್ಞಾನ ಚಾರಿಟೇಬಲ್ ಟ್ರಸ್ಟ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳಿಗೆ ಮಂಜೂರಾತಿ ಪತ್ರ ಹಸ್ತಾಂತರಿಸಿದರು. ಈ ಸಂದರ್ಭ ಸುಜ್ಞಾನ ಚಾರಿ ಟೇಬಲ್ ಟ್ರಸ್ಟ್ ನ ಅಧ್ಯಕ್ಷರು, ಪದಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಕುಮುದ, ಸುಜಯ ಶೆಟ್ಟಿ, ಸೇವಾಪ್ರತಿನಿಧಿ ಜ್ಯೋತಿ ಉಪಸ್ಥಿತರಿದ್ದರು

