ನಾಳೆ (ನ.28) ಉಡುಪಿಗೆ ಪ್ರಧಾನಿ ಮೋದಿ ಭೇಟಿ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಪ್ರಧಾನಿ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು
(Udupi) ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ (ನ.28) ಕ್ಕೆ ಉಡುಪಿಗೆಆಗಮಿಸುವ ಹಿನ್ನೆಲೆಯಲ್ಲಿ ಉಡುಪಿ ನಗರ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ನ.28ಕ್ಕೆ ಸೀಮಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ ನಗರ ಸಿದ್ಧವಾಗಿದೆ. ಬನ್ನಂಜೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದಿಂದ ಕಲ್ಸಂಕದವರೆಗೂ ಪ್ರಧಾನಿ ರೋಡ್ ಶೋ ನಡೆಯಲಿದ್ದು, ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ ಸಂಚಾರ ವ್ಯವಸ್ಥೆಯಲ್ಲೂ ತುಸು ವ್ಯತ್ಯಾಸ ಆಗಲಿದೆ.
ಅಲ್ಲದೇ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲೀಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ.

