ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ದ್ವಿತೀಯ
ಜವಾಹರ್ ಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿಂಗ್ ಶಿವಮೊಗ್ಗ ಇಲ್ಲಿ ನಡೆದ ಸ್ಪರ್ಧೆ
(Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ, ಕಾರ್ತಿಕ್ ಎ ಆಚಾರ್ಯ, ಕೃಷ್ ಬಿ ಪೂಜಾರಿ, ಪ್ರಜ್ವಲ್ ಮೊಯ್ಲಿಯವರು ಶಿವಮೊಗ್ಗದ ಜವಾಹರ್ ಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿಂಗ್, ಇಲ್ಲಿನ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಶನ್ ಇಂಜಿನಿಯರಿಂಗ್ ವಿಭಾಗ ಆಯೋಜಿದ್ದ ರಾಜ್ಯ ಮಟ್ಟದ ಲೈನ್ ಫಾಲೋವರ್ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಗಳಿಸಿರುತ್ತಾರೆ.
ಈ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಸಾಧನೆಯು ಸಂಸ್ಥೆಯು ವಿದ್ಯಾರ್ಥಿಗಳಿಗೆ ನೀಡುವ ತಾಂತ್ರಿಕ ಕೌಶಲ್ಯ, ನವೀನ ಚಟುವಟಿಕೆಗಳ ಮೂಲಕ ತಾಂತ್ರಿಕ ಶ್ರೇಷ್ಠತೆಯನ್ನು ಬೆಳೆಸುವ ಬದ್ದತೆಯನ್ನು ಒಳಗೊಂಡಿದೆ
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಹೃತ್ಪೂರ್ವಕ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.

