• Home  
  • ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : 10ಸಾವಿರ ರೂ. ದಂಡ (Transporting workers in goods vehicles: Rs. 10,000 fine)
- PROBLEMS - ಅಪರಾಧ

ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : 10ಸಾವಿರ ರೂ. ದಂಡ (Transporting workers in goods vehicles: Rs. 10,000 fine)

Share: ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : 10ಸಾವಿರ ರೂ. ದಂಡ ಪೊಲೀಸರು ಈ ಬಗ್ಗೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಕ್ಯಾರೇ ಎನ್ನದ ಗುತ್ತಿಗೆದಾರರು (Karkala) ಕಾರ್ಕಳ : ಪೋಲೀಸರ ಎಚ್ಚರಿಕೆಯನ್ನು ಲೆಕ್ಕಿಸದೆ ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮಷೀನ್ ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುವ ಕೆಲಸ ನಿರಂತರ ಹಾಗೂ ನಿರಾತoಕವಾಗಿ  ನಡೆಯುತ್ತಿದ್ದು, ಪೊಲೀಸರು ವಾಹನವನ್ನು ಬೆನ್ನಟ್ಟಿ ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರ್ಕಳ ಮಾನ್ಯ ನ್ಯಾಯಾಲಯವು ವಾಹನದ ಮಾಲಕ ನಾಗಪ್ಪ ಎಂಬವರಿಗೆ 10 ಸಾವಿರ ರೂ. ದಂಡವಿದಿಸಿದೆ […]

(Karkala) ಕಾರ್ಕಳ : ಪೋಲೀಸರ ಎಚ್ಚರಿಕೆಯನ್ನು ಲೆಕ್ಕಿಸದೆ ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮಷೀನ್ ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುವ ಕೆಲಸ ನಿರಂತರ ಹಾಗೂ ನಿರಾತoಕವಾಗಿ  ನಡೆಯುತ್ತಿದ್ದು, ಪೊಲೀಸರು ವಾಹನವನ್ನು ಬೆನ್ನಟ್ಟಿ ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರ್ಕಳ ಮಾನ್ಯ ನ್ಯಾಯಾಲಯವು ವಾಹನದ ಮಾಲಕ ನಾಗಪ್ಪ ಎಂಬವರಿಗೆ 10 ಸಾವಿರ ರೂ. ದಂಡವಿದಿಸಿದೆ

    ಕಾರ್ಕಳ ಪರಿಸರದಲ್ಲಿ ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬೆಳಿಗ್ಗೆ ಕೆಲಸಕ್ಕೆ ಕರೆದುಕೊಂಡು ಮತ್ತು ಕೆಲಸ ಮುಗಿಸಿ ಹಿಂದಿರುಗುವ ಸಂದರ್ಭದಲ್ಲಿ ಕೂಲಿ ಕಾರ್ಮಿಕರನ್ನು ಸಿಮೆಂಟ್ ಕಾಂಕ್ರೀಟ್ ಮಷೀನ್ ನೊಟ್ಟಿಗೆ ತುಂಬಿಕೊಂಡು ಹೋಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಪೊಲೀಸರು ಈ ಬಗ್ಗೆ ಹಲವಾರು ಬಾರಿ ಖಡಕ್ ಎಚ್ಚರಿಕೆ ನೀಡಿದ್ದರೂ ಕ್ಯಾರೇ ಎನ್ನದ ಗುತ್ತಿಗೆದಾರರು, ಮತ್ತದೇ ಚಾಳಿಯನ್ನು ಮುಂದುವರಿಸುತ್ತಿದ್ದಾರೆ. ವಾಹನದಲ್ಲಿ ಇಷ್ಟಬಂದಂತೆ ಕಾರ್ಮಿಕರನ್ನು ತುಂಬಿಸಿಕೊಂಡು, ಅತಿವೇಗ ಹಾಗೂ ನಿರ್ಲಕ್ಷದಿಂದ ವಾಹನ ಚಲಾಯಿಸುವುದು ದಾರಿಯಲ್ಲಿ ಓಡಾಡುವ ಇತರ ವಾಹನಗಳಿಗೂ ತೊಂದರೆಯಾಗುವ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿತ್ತು. ಈ ಬಗ್ಗೆ ಕಾರ್ಯಪ್ರವ್ರತರಾದ ಕಾರ್ಕಳ ನಗರ ಪೊಲೀಸರು ವಾಹನವನ್ನು ಬೆನ್ನಟ್ಟಿ ಕಾರ್ಕಳ ಪುರಸಭಾ ವ್ಯಾಪ್ತಿಯ ಶಿವತಿಕೆರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಕಾರ್ಕಳ ನ್ಯಾಯಾಲಯಕ್ಕೆ ಒಪ್ಪಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

   ಕಾಪುವಿನಲ್ಲಿ ಇತ್ತೀಚೆಗೆ ಇವೆಂಟ್‌ ಕೆಲಸದ ಕಾರ್ಮಿಕರನ್ನು ಮತ್ತು ಸಾಮಾನುಗಳನ್ನು ಸಾಗಿಸುತ್ತಿದ್ದ ಸಂದರ್ಭ ಟೆಂಪೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಗುದ್ದ ಪಲ್ಟಿ ಆದ ಸಂದರ್ಭ ಐವರು ಕಾರ್ಮಿಕರು ಮೃತಪಟ್ಟಿದ್ದರು.

   ಈ ಘಟನೆ ಮಾಸುವ ಮುನ್ನವೇ ಹೆಜಮಾಡಿ ಹೆದ್ದಾರಿಯಲ್ಲಿ ಸಿಮೆಂಟ್ ಕಾಂಕ್ರೀಟ್ ಮಷೀನ್ ನೊಂದಿಗೆ ಟೆಂಪೋದಲ್ಲಿ ಕಾರ್ಮಿಕರು ಸಾಗುತ್ತಿದ್ದ ಸಂದರ್ಭ ಟೆಂಪೋ ಪಲ್ಟಿಯಾಗಿ ಮಹಿಳೆಯೋರ್ವರು ಧಾರುಣವಾಗಿ ಮೃತಪಟ್ಟಿದ್ದಾರೆ.

    ಕೆಲವು ವರ್ಷಗಳ ಹಿಂದೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರ್ಗಾನ ಗ್ರಾಮದ ಶಾಲಾ ಮುಂಭಾಗದ ತಿರುವಿನಲ್ಲಿ ವಾಹನದಲ್ಲಿದ್ದ ಸಿಮೆಂಟ್ ಕಾಂಕ್ರೀಟ್ ಮಷೀನ್ ಕಾರ್ಮಿಕರ ಮೇಲೆ ಮಗುಚಿ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು ಹಲವಾರು ಕಾರ್ಮಿಕರು ಗಂಭೀರ ಗಾಯ ಗೊಂಡಿದ್ದರು.   

  ಗಂಭೀರತೆಯನ್ನು ಅರಿತು ಸ್ವಲ್ಪ ಮಟ್ಟಿನ ಸುಧಾರಣೆ ಕಂಡಿದ್ದರೂ ಪುನಃ ಹಿಂದಿನಂತೆಯೇ ಕಾರ್ಮಿಕರನ್ನು ಕೊಂಡೊಯ್ಯುತ್ತಿರುವುದು ಕಂಡು ಬಂದಿದೆ. ಅಪಾಯವನ್ನು ಅರಿತಿದ್ದರೂ ಖ್ಯಾರೆ ಎನ್ನದ ಕಾರ್ಮಿಕರಿಗೆ ಹಾಗೂ ಕಾಂಟಾಕ್ಟ್ ದಾರರಿಗೆ ಪೊಲೀಸರು ನ್ಯಾಯಾಲಯದ ಮೂಲಕ ದಂಡ ಪಾವತಿಸುವಂತೆ ಮಾಡಿ ಎಚ್ಚರಿಕೆಯ ಕರೆಗಂಟೆ ನೀಡಿದ್ದಾರೆ.

 ಈ ಕಾರ್ಯಕ್ಕೆ  ಸಾರ್ವಜನಿಕ ವಲಯದಲ್ಲಿ ಪೋಲೀಸರ ಬಗ್ಗೆ ಪ್ರಶಂಸೆಯ ಮಾತು ಕೇಳಿಬರುತ್ತಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.