• Home  
  • ವಿಟ್ಲ ಕೋಳಿ ಅಂಕಕ್ಕೆ ದಾಳಿ, ಶಾಸಕರ ಸಹಿತ 16 ಜನರು ಪೊಲೀಸ್‌ ವಶ (Attack on  “Koli anka”, 16 people including MLA taken into police custody)
- Crime

ವಿಟ್ಲ ಕೋಳಿ ಅಂಕಕ್ಕೆ ದಾಳಿ, ಶಾಸಕರ ಸಹಿತ 16 ಜನರು ಪೊಲೀಸ್‌ ವಶ (Attack on  “Koli anka”, 16 people including MLA taken into police custody)

Share: ವಿಟ್ಲ ಕೋಳಿ ಅಂಕಕ್ಕೆ ದಾಳಿ, ಶಾಸಕರ ಸಹಿತ 16 ಜನರು ಪೊಲೀಸ್‌ ವಶ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧವೂ ಎಫ್‌ಐಆ‌ರ್  (Vitla) ವಿಟ್ಲ : ವಿಟ್ಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕೇಪು ಗ್ರಾಮದಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ಶನಿವಾರ ದಾಳಿ ನಡೆಸಿದ್ದು, 16 ಜನರನ್ನು ವಶಕ್ಕೆ ಪಡೆದಿದ್ದಾರೆ. ಕೋಳಿ ಅಂಕಕ್ಕೆ ಬಳಸಿದ್ದ 22 ಹುಂಜಗಳನ್ನು ಹಾಗೂ ಬಾಲುಗಳನ್ನು (ಚೂಪಾದ ಕತ್ತಿಗಳನ್ನು) ವಶಪಡಿಸಿಕೊಂಡಿದ್ದಾರೆ.     ಕೋಳಿ ಅಂಕದ ಸ್ಥಳದಲ್ಲಿ ಹಾಜರಿದ್ದ […]

 (Vitla) ವಿಟ್ಲ : ವಿಟ್ಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕೇಪು ಗ್ರಾಮದಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ಶನಿವಾರ ದಾಳಿ ನಡೆಸಿದ್ದು, 16 ಜನರನ್ನು ವಶಕ್ಕೆ ಪಡೆದಿದ್ದಾರೆ. ಕೋಳಿ ಅಂಕಕ್ಕೆ ಬಳಸಿದ್ದ 22 ಹುಂಜಗಳನ್ನು ಹಾಗೂ ಬಾಲುಗಳನ್ನು (ಚೂಪಾದ ಕತ್ತಿಗಳನ್ನು) ವಶಪಡಿಸಿಕೊಂಡಿದ್ದಾರೆ.

    ಕೋಳಿ ಅಂಕದ ಸ್ಥಳದಲ್ಲಿ ಹಾಜರಿದ್ದ ಹಾಗೂ ಕಾನೂನು ಬಾಹಿರವಾದ ಕೋಳಿ ಅಂಕವನ್ನು ಮುಂದುವರಿಸುವಂತೆ ಜನರನ್ನು ಪ್ರಚೋದಿಸಿ, ಪ್ರೇರಣೆ ನೀಡಿದ ಆರೋಪದ ಮೇಲೆ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧವೂ ಎಫ್‌ಐಆ‌ರ್ ದಾಖಲಿಸಿಕೊಂಡಿದ್ದಾರೆ.

   ಯಾವುದೇ ಪರವಾನಗಿ ಪಡೆಯದೆ, ಕಾನೂನು ಬಾಹಿರ ಕೃತ್ಯಕ್ಕೆ ಅನುವು ಮಾಡಿಕೊಟ್ಟ ಆರೋಪದ ಮೇಲೆ ಜಾಗದ ಮಾಲೀಕ ಮರಳೀಧರ ರೈ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.