• Home  
  •  ಚಿತ್ರದುರ್ಗದಲ್ಲಿ ಘನಘೋರ ದುರಂತ: 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ (Horrific tragedy in Chitradurga: More than 9 passengers burnt alive)
- ಅಪಘಾತ

 ಚಿತ್ರದುರ್ಗದಲ್ಲಿ ಘನಘೋರ ದುರಂತ: 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ (Horrific tragedy in Chitradurga: More than 9 passengers burnt alive)

Share: ಚಿತ್ರದುರ್ಗದಲ್ಲಿ ಘನಘೋರ ದುರಂತ: 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, 21 ಜನರಿಗೆ ಗಾಯ (Chitradurga) ಚಿತ್ರದುರ್ಗ, ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ 9  ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಾವಿನ […]

ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, 21 ಜನರಿಗೆ ಗಾಯ

(Chitradurga) ಚಿತ್ರದುರ್ಗ, ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ 9  ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

   ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

  ಇತ್ತೀಚೆಗೆ ಆಂಧ್ರ ಪ್ರದೇಶದ ಕರ್ನೂಲ್ ನಲ್ಲಿ ಬ್ಬೊಂದು ಹೊತ್ತಿ ಉರಿದು 25ಕ್ಕೂ ಅಧಿಕ ಮಂದಿ ಸಜೀವ ದಹನವಾದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.

ಬಸ್ಸಿನಲ್ಲಿದ್ದ 9ಕ್ಕೂ ಅಧಿಕ ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಲ್ಲದೆ, ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ. ಬಸ್​ನಲ್ಲಿ ಸುಮಾರು 32 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.

    ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿದ ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಅವರು, “ಇದು ಬೆಳಗಿನ‌ಜಾವ ಎರಡು ಗಂಟೆ ಸುಮಾರಿಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್​​ಗೆ ಎದುರುಗಡೆ ಬಂದಂತಹ  ಲಾರಿ ಅಪ್ಪಳಿಸಿದೆ. ಲಾರಿ ಬಸ್​ನ ಡೀಸೆಲ್‌ ಟ್ಯಾಂಕ್​ಗೆ ಒಡೆದಿರಬಹುದು. ಡಿಸೇಲ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಬಸ್​​ನ ಒಳಗಿದ್ದ ಕೆಲ ಪ್ರಯಾಣಿಕರು ಹೊರ ಬಂದಿದ್ದಾರೆ. ಒಳಗೆ ಇದ್ದ ಎಂಟು ಜನ ಹಾಗೂ ಲಾರಿ ಚಾಲಕ ಸೇರಿ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ” ಎಂದು ತಿಳಿಸಿದರು.

   ”12 ಜನ ಗಾಯಳುಗಳು ಹಿರಿಯೂರು ಆಸ್ಪತ್ರೆ, 9 ಜನ ಶಿರಾ ಆಸ್ಪತ್ರೆ ಹಾಗೂ ಮೂವರು ತುಮಕೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಪ್ರಯಾಣಿಕನಿಗೆ ಹೆಚ್ಚು ಸುಟ್ಟ ಗಾಯಗಳಾದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಆಗಿರುವ ಪ್ರಯಾಣಿಕ ಬಿಟ್ಟು ಒಟ್ಟು 24 ಜನ ಪ್ರಾಣಪಾಯದಿಂದ ಪಾರಾಗಿದ್ದಾರೆ. ಬಸ್​ನಲ್ಲಿದ್ದ 32 ಜನ ಪೈಕಿ 8 ಜನರ ಜೊತೆಗೆ ಪುಟ್ಟ ಮಗುವಿನ ಶವ ಇದೆ ಎಂದು ತಿಳಿದಿದೆ. ಮೃತರ ಡಿಎನ್ಎ ಪರೀಕ್ಷೆ ಮಾಡಲಾಗುತ್ತದೆ. ಬಳಿಕ ಶವಗಳ ಹಸ್ತಾಂತರ ಮಾಡುತ್ತೇವೆ” ಎಂದು ತಿಳಿಸಿದರು.

   ದಾಂಡೇಲಿಗೆ ತೆರಳಿದ್ದ 42 ಜನ ಮಕ್ಕಳಿದ್ದ ಬಸ್ ಸುರಕ್ಷಿತ

 ಇದೇ ಸಂದರ್ಭದಲ್ಲಿ, ಅಪಘಾತವಾಗಿ ಸುಟ್ಟು ಕರಕಲಾಗಿರುವ ಬಸ್ ಸರಿಸಮವಾಗಿ ಚಲಿಸುತ್ತಿದ್ದ ಶಾಲಾ ಮಕ್ಕಳ ಬಸ್ ದಾಂಡೇಲಿಗೆ ತೆರಳುತ್ತಿತ್ತು. ಅಪಘಾತವಾದ ಬಸ್​​ ಮಕ್ಕಳ ಬಸ್ಸಿಗೆ ಟಚ್ ಆಗಿದೆ. ಮಕ್ಕಳಿದ್ದ ಬಸ್ ರಾಷ್ಟ್ರೀಯ ಹೆದ್ದಾರಿ ದಾಟಿ ಚರಡಿ ದಾಟಿ ಆ ಭಾಗಕ್ಕೆ ಹೋಗಿ ನಿಂತಿದೆ. ಅ ಬಸ್ಸಿನಲ್ಲಿದ್ದ 42 ಜನ ಮಕ್ಕಳು ಸುರಕ್ಷಿತವಾಗಿದ್ದಾರೆ. ಮಕ್ಕಳಿದ್ದ ಬಸ್ಸಿನ ಚಾಲಕ ಇಡೀ ಘಟನೆಯ ಪ್ರತ್ಯಕ್ಷದರ್ಶಿ ಅವರಿಂದ ಹೇಳಿಕೆ ಪಡೆದಿದ್ದೇವೆ” ಎಂದು ಐಜಿಪಿ ರವಿಕಾಂತೇಗೌಡ ಹೇಳಿದರು.

ಪ್ರಧಾನಿ ಸಂತಾಪ

 ಅಪಘಾತದಲ್ಲಿ ಸಜೀವ ದಹನವಾದ ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಸಂಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳ ಜೊತೆ ನಿಲ್ಲುವ ಭರವಸೆ ನೀಡಿರುವ ಅವರು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಆರ್ಥಿಕ ನೆರವನ್ನು ಘೋಷಿಸಿದ್ದಾರೆ.

  ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ ‘X’ ಮೂಲಕ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಕರ್ನಾಟಕದ ಚಿತ್ರದುರ್ಗದಲ್ಲಿ ಸಂಭವಿಸಿದ ರಸ್ತೆ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳನ್ನು ಸೂಚಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಬರೆದುಕೊಂಡಿದ್ದಾರೆ.

 ಅಲ್ಲದೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 21ಕ್ಕೂ ಹೆಚ್ಚು ಪ್ರಯಾಣಿಕರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.