• Home  
  • ಕಾಪು ಕಾಂಗ್ರೆಸ್ ನಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ (Kaup Congress celebrates Christmas in a friendly manner)
- fastival

ಕಾಪು ಕಾಂಗ್ರೆಸ್ ನಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ (Kaup Congress celebrates Christmas in a friendly manner)

Share: ಕಾಪು ಕಾಂಗ್ರೆಸ್ ನಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ ವಿಶ್ವಕ್ಕೆ ಪಸರಿಸಿದ ಯೇಸುಕ್ರಿಸ್ತನ ಜೀವನವು ಸಾರ್ವಕಾಲಿಕ ಆದರ್ಶಪ್ರಾಯ: ಸೊರಕೆ (Kaup) ಕಾಪು : ವಿಶ್ವದ ಮಹಾನ್ ಪ್ರವಾದಿಗಳಾದ ಯೇಸುಕ್ರಿಸ್ತ, ಮಹಮ್ಮದ್ ಪೈಗಂಬರ, ನಾರಾಯಣ ಗುರುಗಳು ಮಾನವ ಕುಲಕ್ಕೆ ನೀಡಿರುವ ಸಂದೇಶ – ಶಾಂತಿ, ಸಾಮರಸ್ಯ ಮತ್ತು ಪ್ರೀತಿಯಿಂದ ಕೂಡಿದ ಸಹಬಾಳ್ವೆ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು ಹೇಳಿದರು.    ಅವರು, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಯೋಗದಲ್ಲಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಏರ್ಪಡಿಸಲಾಗಿದ್ದ […]

ವಿಶ್ವಕ್ಕೆ ಪಸರಿಸಿದ ಯೇಸುಕ್ರಿಸ್ತನ ಜೀವನವು ಸಾರ್ವಕಾಲಿಕ ಆದರ್ಶಪ್ರಾಯ: ಸೊರಕೆ

(Kaup) ಕಾಪು : ವಿಶ್ವದ ಮಹಾನ್ ಪ್ರವಾದಿಗಳಾದ ಯೇಸುಕ್ರಿಸ್ತ, ಮಹಮ್ಮದ್ ಪೈಗಂಬರ, ನಾರಾಯಣ ಗುರುಗಳು ಮಾನವ ಕುಲಕ್ಕೆ ನೀಡಿರುವ ಸಂದೇಶ – ಶಾಂತಿ, ಸಾಮರಸ್ಯ ಮತ್ತು ಪ್ರೀತಿಯಿಂದ ಕೂಡಿದ ಸಹಬಾಳ್ವೆ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು ಹೇಳಿದರು.

   ಅವರು, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಯೋಗದಲ್ಲಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಏರ್ಪಡಿಸಲಾಗಿದ್ದ “ಸೌಹಾರ್ದ ಕ್ರಿಸ್ಮಸ್ ಆಚರಣೆ ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

   ಪ್ರೀತಿ, ಸಹಬಾಳ್ವೆ ಮತ್ತು ಶಾಂತಿಯ ಬೆಳಕನ್ನು ವಿಶ್ವಕ್ಕೆ ಪಸರಿಸಿದ ಯೇಸುಕ್ರಿಸ್ತನ ಜೀವನವು ಸಾರ್ವಕಾಲಿಕ ಆದರ್ಶಪ್ರಾಯವಾಗಿದೆ. ಪ್ರಸಕ್ತ ದೇಶದಲ್ಲಿ ನಡೆಯುತ್ತಿರುವ ಕೋಮು ಸಂಘರ್ಷ ಮತ್ತು ಜಾತಿ – ಧರ್ಮಗಳ ನಡುವೆ ನಡೆಯುತ್ತಿರುವ ಅಹಿತಕರ ವಿದ್ಯಮಾನಗಳನ್ನು ಅವಲೋಕಿಸಿದಾಗ, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ಅಪಾಯದಲ್ಲಿದೆ ಎಂದನಿಸುತ್ತಿದೆ ಎಂದರು.

   ಈ ಸಂದರ್ಭದಲ್ಲಿ, ದೇಶ ಕಂಡ ಅತ್ಯುತ್ತಮ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ದಿ. ಡಾ. ಮನ್ಮೋಹನ್ ಸಿಂಗ್ ರವರ ಪುಣ್ಯತಿಥಿಯ ಪ್ರಯುಕ್ತ, ದೇಶಕ್ಕಾಗಿ ಅವರು ನೀಡಿರುವ ಸೇವೆ, ಕ್ರಾಂತಿಕಾರಿ ಯೋಜನೆಗಳು, ಕಾರ್ಯಕ್ರಮಗಳನ್ನು ಸ್ಮರಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಶ್ರದ್ಧಾಂಜಲಿ ಅರ್ಪಿಸಲಾಯಿತು.

   ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ನಿರೂಪಕ ಆಲ್ವಿನ್ ದಾಂತಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಂ. ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಂತಲತಾ ಎಸ್. ಶೆಟ್ಟಿ, ನವೀನ್ ಚಂದ್ರ ಸುವರ್ಣ, ಗೋಪಾಲ್ ಪೂಜಾರಿ ಪಲಿಮಾರು, ಪ್ರಶಾಂತ್ ಜತ್ತನ್ನ, ಶರ್ಫುದ್ದೀನ್ ಶೇಖ್, ಹಸನಬ್ಬ ಶೇಖ್, ನಿಯಾಜ್ ಪಡುಬಿದ್ರಿ, ಪಕ್ಷದ ವಿವಿಧ ಘಟಕ – ಸಮಿತಿಗಳ ಪದಾಧಿಕಾರಿಗಳು, ಪುರಸಭಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

 ಅಶ್ವಿನಿ ಬಂಗೇರ ಸ್ವಾಗತಿಸಿದರು. ತಸ್ನಿನ್ ಆರಾ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.