ಭಾವೀ ಪರ್ಯಾಯ ಪೀಠಾಧಿಪತಿಯವರಿಗೆ ಪುತ್ತೂರಿನಲ್ಲಿ ಪೌರ ಸನ್ಮಾನ
ಸರ್ವಜ್ಞ ಪೀಠ ಅಲಂಕರಿಸಲಿರುವ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು
(Putturu) ಪುತ್ತೂರು: ಭಾವೀ ಪರ್ಯಾಯ ಪೀಠಾಧೀಶ ಹಾಗೂ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ, ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಮಂಗಳವಾರ ಪುತ್ತೂರಿನ ಭಕ್ತರಿಂದ ಪೌರ ಸನ್ಮಾನ ನಡೆಯಿತು.
ಶ್ರೀಗಳನ್ನು ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು. ಬಳಿಕ ಶ್ರೀಗಳು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಗೈದರು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪುತ್ತೂರು ಪೌರ ಸನ್ಮಾನ ಸಮಿತಿಯ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಕುಂಟಾರು ರವೀಶ್ ತಂತ್ರಿ, ಬಲರಾಮ ಆಚಾರ್ಯ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

