ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಗಣರಾಜ್ಯೋತ್ಸವದ ಧ್ವಜಾರೋಹಣಗೈದ ಪ್ರಾಂಶುಪಾಲ ಎಂ.ನೀಲಾನಂದ ನಾಯ್ಕ್
(Kaup) ಕಾಪು: ಕಾಪು ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ಜರಗಿತು.
ದಂಡತೀರ್ಥ ವಿದ್ಯಾ ಸಂಸ್ಥೆಯ ಎಂ. ನೀಲಾನಂದ ನಾಯ್ಕ್ ರವರು ಧ್ವಜಾರೋಹಣಗೈದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಭಾರತದ ಸಂವಿಧಾನವು ಪ್ರತಿಯೊಬ್ಬ ಭಾರತೀಯನ ಹಕ್ಕು, ಕರ್ತವ್ಯ ಮತ್ತು ಕನಸುಗಳ ಪ್ರತಿಬಿಂಬ. ನಮ್ಮ ಸಂವಿಧಾನದ ಆಶಯದಂತೆ ದೇಶದ ಕಾನೂನುನನ್ನು ಗೌರವಿಸಿ ಉತ್ತಮ ನಾಗರೀಕರಾಗೋಣ ಎಂದರು.
ಈ ಸಂದರ್ಭದಲ್ಲಿ ಶಿಕ್ಷಣ-ಸಂಯೋಜಕ ಶಿವಣ್ಣ ಬಾಯಾರ್, ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಗೇಬ್ರಿಯಲ್ ಮಸ್ಕರೇನಸ್, ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕೃಪಾ ಅಮ್ಮನ್ನ, ದೈಹಿಕ ಶಿಕ್ಷಣ ಅಧ್ಯಾಪಕ ಪ್ರಭಾಕರ್ ಶೆಟ್ಟಿ ಉಪಸ್ಥಿತರಿದ್ದರು.

