• Home  
  • ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೂಡ ಸಾಧಿಸಲು ಸಮರ್ಥರು : ಎಂ ಎ ಗಫೂರ್ (Manipal: Police arrest young man with car for dangerous, speeding, reckless driving)
- ಶಾಲಾ ಕಾಲೇಜು

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೂಡ ಸಾಧಿಸಲು ಸಮರ್ಥರು : ಎಂ ಎ ಗಫೂರ್ (Manipal: Police arrest young man with car for dangerous, speeding, reckless driving)

Share: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೂಡ ಸಾಧಿಸಲು ಸಮರ್ಥರು : ಎಂ ಎ ಗಫೂರ್ ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಸೊಲ್ಯೂಷನ್ಸ್ ವಿಜ್ಞಾನ ಪ್ರಯೋಗೋಪಕರಣಗಳ ಕೊಡುಗೆ (Udupi) ಉಡುಪಿ : ಸರಕಾರಿ ಶಾಲೆಯಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬೌದ್ಧಿಕವಾಗಿಯೂ ಮಾನಸಿಕವಾಗಿಯೂ ಸಮರ್ಥರಿದ್ದಾರೆ. ಅವರಿಗೆ ಅನುಕೂಲತೆಗಳನ್ನು ಮತ್ತು ಅವಕಾಶಗಳನ್ನು ಒದಗಿಸಿಕೊಟ್ಟಲ್ಲಿ ಅವರು ಉನ್ನತವಾದ ಸಾಧನೆಯನ್ನು ಮಾಡಬಲ್ಲರು. ಈ ದಿಸೆಯಲ್ಲಿ ಸಂಘ ಸಂಸ್ಥೆಗಳೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಡುಗೆಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ ಎ ಗಫೂರ್ ಅಭಿಪ್ರಾಯಪಟ್ಟರು.   ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ರವರಿಂದ ಸುನಿಧಿ ಫೌಂಡೇಶನ್ ಟ್ರಸ್ಟ್ ನೀಡುವ ಸುಮಾರು 2 ಲಕ್ಷ ರುಪಾಯಿ ಮೌಲ್ಯದ ವಿಜ್ಞಾನ ಪ್ರಯೋಗೋಪಕರಣಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.  ಕನ್ನಡ ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ, ಸುನಿಧಿ ಫೌಂಡೇಶನ್ ನ ರೂಪಶ್ರೀ ರತ್ನಾಕರ್, ಪ್ರಾಂಶುಪಾಲ ಜಗದೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಡಯಟ್ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ಮುಖ್ಯೋಪಾಧ್ಯಾಯನಿ ಇಂದಿರಾ ಬಿ ಮತ್ತು ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು. Share:

(Udupi) ಉಡುಪಿ : ಸರಕಾರಿ ಶಾಲೆಯಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬೌದ್ಧಿಕವಾಗಿಯೂ ಮಾನಸಿಕವಾಗಿಯೂ ಸಮರ್ಥರಿದ್ದಾರೆ. ಅವರಿಗೆ ಅನುಕೂಲತೆಗಳನ್ನು ಮತ್ತು ಅವಕಾಶಗಳನ್ನು ಒದಗಿಸಿಕೊಟ್ಟಲ್ಲಿ ಅವರು ಉನ್ನತವಾದ ಸಾಧನೆಯನ್ನು ಮಾಡಬಲ್ಲರು. ಈ ದಿಸೆಯಲ್ಲಿ ಸಂಘ ಸಂಸ್ಥೆಗಳೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಡುಗೆಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ ಎ ಗಫೂರ್ ಅಭಿಪ್ರಾಯಪಟ್ಟರು. 

 ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ರವರಿಂದ ಸುನಿಧಿ ಫೌಂಡೇಶನ್ ಟ್ರಸ್ಟ್ ನೀಡುವ ಸುಮಾರು 2 ಲಕ್ಷ ರುಪಾಯಿ ಮೌಲ್ಯದ ವಿಜ್ಞಾನ ಪ್ರಯೋಗೋಪಕರಣಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. 

ಕನ್ನಡ ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ, ಸುನಿಧಿ ಫೌಂಡೇಶನ್ ನ ರೂಪಶ್ರೀ ರತ್ನಾಕರ್, ಪ್ರಾಂಶುಪಾಲ ಜಗದೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಡಯಟ್ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ಮುಖ್ಯೋಪಾಧ್ಯಾಯನಿ ಇಂದಿರಾ ಬಿ ಮತ್ತು ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.