• Home  
  • ಕಾಪು ಶ್ರೀ ಹೊಸ ಮಾರಿಗುಡಿ ಪುನರ್ ಪ್ರತಿಷ್ಠಾ  ವರ್ಧಂತಿ – ಮಾತೃ ವೈಭವಕ್ಕೆ ಚಾಲನೆ (Kapu Shree Hosa Marigudi Punar Pratistha Vardhanti – Drive to Matru Vibhava)
- ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ಪುನರ್ ಪ್ರತಿಷ್ಠಾ  ವರ್ಧಂತಿ – ಮಾತೃ ವೈಭವಕ್ಕೆ ಚಾಲನೆ (Kapu Shree Hosa Marigudi Punar Pratistha Vardhanti – Drive to Matru Vibhava)

Share: ಕಾಪು ಶ್ರೀ ಹೊಸ ಮಾರಿಗುಡಿ ಪುನರ್ ಪ್ರತಿಷ್ಠಾ  ವರ್ಧಂತಿ – ಮಾತೃ ವೈಭವಕ್ಕೆ ಚಾಲನೆ ಕಾಪು ಶ್ರೀ ಹೊಸ ಮಾರಿಗುಡಿಗೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ  (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಸಾನಿಧ್ಯದಲ್ಲಿ ಫೆ. 28ರಿಂದ ಮಾ. 2ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಗುರುವಾರ  ಸಂಜೆ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ […]

 (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಸಾನಿಧ್ಯದಲ್ಲಿ ಫೆ. 28ರಿಂದ ಮಾ. 2ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಗುರುವಾರ  ಸಂಜೆ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ ವೈಭವದಿಂದ ಜರಗಿತು.

   ಕಾಪು ಉಳಿಯಾರಗೋಳಿ ದಂಡತೀರ್ಥ ಮಠದ ಬಳಿಯಿಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು.

  ಕಾಪು ಮಾರಿಯಮ್ಮನ ಭಕ್ತಾಧಿಗಳು, ಕಾಪುವಿನ ಅಮ್ಮನ ಮಕ್ಕಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಹೊರೆ ಕಾಣಿಕೆ ಸಮರ್ಪಿಸಲಾಯಿತು.

  ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಮಾತೃವೈಭವ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ,  ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಸಚಿವ ಲಾಲಾಜಿ ಆರ್ ಮೆಂಡನ್, ಬಾಲಾಜಿ ಯೋಗೀಶ್‌ ಶೆಟ್ಟಿ, ಪ್ರಭಾಕರ ಪೂಜಾರಿ, ಕಾಪು ದಿವಾಕರ ಶೆಟ್ಟಿ, ಹೊರೆಕಾಣಿಕೆ ಸಮರ್ಪಣಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿ ಮತ್ತು ಮಾತೃವೈಭವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.