• Home  
  •   ಮಾ.1 : ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ, ಬೈಕ್ ಜಾಥ (Mar. 1 : Mass offering of Gurupada, Bike Jatha)
- ಧಾರ್ಮಿಕ

  ಮಾ.1 : ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ, ಬೈಕ್ ಜಾಥ (Mar. 1 : Mass offering of Gurupada, Bike Jatha)

Share:   ಮಾ.1 : ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ, ಬೈಕ್ ಜಾಥಾ    ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸ್ಥಾಪಕರು, ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪ್ರತಿಮೆ ನಿರ್ಮಾಣ (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕುಲಗುರುಗಳಾದ ಮಾಧವ ಮಂಗಲ ಪೂಜಾರ್ಯರ ಪುತ್ಥಳಿ ಪ್ರತಿಮೆ ನಿರ್ಮಾಣದ ಪೂರ್ವಭಾವಿಯಾಗಿ ಮಾ.1 ರಂದು ಶ್ರೀಕ್ಷೇತ್ರ ಉಚ್ಚಿಲದಲ್ಲಿ ಸಾಮೂಹಿಕ ಗುರು ಪಾದ ಕಾಣಿಕೆ ಸಮರ್ಪಣೆ, ಸಾಮೂಹಿಕ ಬೈಕ್ ರ್ಯಾಲಿ, ಬೃಹತ್ ಸಮಾವೇಶ […]

(Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕುಲಗುರುಗಳಾದ ಮಾಧವ ಮಂಗಲ ಪೂಜಾರ್ಯರ ಪುತ್ಥಳಿ ಪ್ರತಿಮೆ ನಿರ್ಮಾಣದ ಪೂರ್ವಭಾವಿಯಾಗಿ ಮಾ.1 ರಂದು ಶ್ರೀಕ್ಷೇತ್ರ ಉಚ್ಚಿಲದಲ್ಲಿ ಸಾಮೂಹಿಕ ಗುರು ಪಾದ ಕಾಣಿಕೆ ಸಮರ್ಪಣೆ, ಸಾಮೂಹಿಕ ಬೈಕ್ ರ್ಯಾಲಿ, ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಹಾಜನ ಸಂಘದ ಗೌರವ ಸಲಹೆಗಾರರಾದ ಡಾ. ಜಿ. ಶಂಕರ್ ತಿಳಿಸಿದ್ದಾರೆ.

  ಶುಕ್ರವಾರ  ದೇವಳದ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಅವರು ಮಾಹಿತಿ ನೀಡಿದರು.

  ಮಾರ್ಚ್ 31, 1966ರಂದು ಕೀರ್ತಿಶೇಷರಾಗಿರುವ ಸದ್ರಿ ಗುರುಪರಂಪರೆಯ ಕೊನೆಯ ಗುರುಗಳೂ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸ್ಥಾಪಕರೂ ಆಗಿರುವ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಪ್ರತಿಮೆಯನ್ನು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಬೇಕೆಂದು ಅಷ್ಟಮಂಗಳ ಪ್ರಶ್ನೆಯಲ್ಲಿ ಕಂಡುಕೊಂಡಂತೆ, ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬೃಹತ್ ಕಂಚಿನ ಪುತ್ಥಳಿಯನ್ನು ಸುಮಾರು 3.50 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಆವರಣದಲ್ಲಿ ನಿರ್ಮಿಸುವ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

  ದೇವಸ್ಥಾನದ ಮುಂಭಾಗದಲ್ಲಿ 30 ಅಡಿ ಎತ್ತರದ ಗುರುಗಳ ಕಂಚಿನ ಪುತ್ಥಳಿ ನಿರ್ಮಾಣವಾಗುತ್ತಿದ್ದು ಆ ಜಾಗದಲ್ಲಿ ಗುರುಗಳ ಚಿನ್ನ ಲೇಪಿತ ಪಾದುಕೆಯನ್ನು ಇಡಲು ಉದ್ದೇಶಿಸಲಾಗಿದೆ. ಅದೇ ಜಾಗದಲ್ಲಿ ಸಮಾಜ ಬಾಂಧವರು ಪಾದ ಕಾಣಿಕೆ ಸಮರ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ.

ಮಂಗಳೂರಿನಲ್ಲಿ ಪುತ್ಥಳಿ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಮುಂದಿನ ದಸರಾ ಸಂದರ್ಭಪುತ್ಥಳಿ ಪ್ರತಿಷ್ಠಾಪನೆಗೆ ನಿರ್ಧರಿಸಲಾಗಿದೆ.  ಮಾ.1ರಂದು ಬೆಳಗ್ಗೆ 10.30ರಿಂದ ಶ್ರೀ ದೇವಳದ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ.

  ಬೃಹತ್ ಸಮಾವೇಶ, ದ್ವಿಚಕ್ರ ವಾಹನ ಜಾಥಾ:

 ಕಾಸರಗೋಡು ಜಿಲ್ಲೆಯ ಉಪ್ಪಳದಿಂದ ಬೈಂದೂರು ತಾಲೂಕಿನ ಶೀರೂರು ವರೆಗಿನ ಒಟ್ಟು 336 ಮೊಗವೀರ ಗ್ರಾಮ ಸಭೆ ಹಾಗೂ ಕೂಡುಕಟ್ಟುಸೇರಿದಂತೆ ದೇಶ-ವಿದೇಶಗಳಲ್ಲಿರುವ ಮೊಗವೀರ ಸಂಘಟನೆಗಳ ಒಟ್ಟು 10 ಸಾವಿರಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಸಮಾಜ ಭಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಡಾ. ಜಿ ಶಂಕರ್‌ ಹೇಳಿದ್ದಾರೆ.

   ಅಂಗಾಂಗ ದಾನ: ಕಾರ್ಯಕ್ರಮವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದೊಂದಿಗೆ ಸಮಾಜದ 500ಕ್ಕೂ ಅಧಿಕ ಯುವಕರು ಅಂಗಾಗ ದಾನ ನೋಂದಣಿಗೆ ಸಿದ್ಧತೆ ನಡೆಸಿದ್ದಾರೆ. ಮಣಿಪಾಲ ಕೆಎಂಸಿ ಸಹಯೋಗದೊಂದಿಗೆ ನೋಂದಣಿ ಕಾರ್ಯಕ್ರಮ ನಡೆಯಲಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ ತಿಳಿಸಿದರು.

   ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಮನೋಜ್ ಸಾಲ್ಯಾನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಗಿರಿಧರ ಸುವರ್ಣ, ಮೊಗವೀರ  ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಬಾರ್ಕೂರು ಹೋಬಳಿ ಅಧ್ಯಕ್ಷ ಸತೀಶ್ ಅಮೀನ್ ಬೆಣ್ಣೆಕುದ್ರು, ಬಗ್ವಾಡಿ ಹೋಬಳಿ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರವೀಶ್ ಎಸ್. ಕೊರವಡಿ, ದಿನೇಶ್ ಎರ್ಮಾಳ್, ವಿನಯ ಕರ್ಕೇರ, ಸುಜಿತ್ ಎಸ್.ಸಾಲ್ಯಾನ್, ಗುಂಡು ಬಿ.ಅಮೀನ್, ವಾಸುದೇವ ಸಾಲ್ಯಾನ್, ಸುಧಾಕರ ಕುಂದರ್, ಪವನ್ ಆನಂದ್, ಯಜೇಶ್ ಕರ್ಕೇರ, ಸತೀಶ್ ಕುಂದರ್ ಮಲ್ಪೆ ಕಿಶೋರ್ ಡಿ. ಸುವರ್ಣ ಮಲ್ಪೆ ಕರುಣಾಕರ ಸಾಲ್ಯಾನ್ ಮಲ್ಪೆ, ಶಿವಾನಂದ ಕುಂದರ್ ಮಲ್ಪೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.