• Home  
  • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ (Satyanarayan Puja Program by Sri Kshetra Dharmasthala Village Development Scheme)
- ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ (Satyanarayan Puja Program by Sri Kshetra Dharmasthala Village Development Scheme)

Share: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮ (Kalatturu) ಕಳತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಚ್ಚಿಲ ವಲಯದ ವತಿಯಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನೆರವೇರಿತು.   ಪೂಜಾ ವಿಧಿ ವಿಧಾನಗಳನ್ನು ದೇವಸ್ಥಾನದ ಅರ್ಚಕ ರಂಗನಾಥ ಭಟ್ ನೆರವೇರಿಸಿದರು.   ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪ್ರವೀಣ್ ಕುಮಾರ್‌ ಗುರ್ಮೆ ಉದ್ಘಾಟಿಸಿದರು. ಅವರು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯು ಧಾರ್ಮಿಕ ವಿವಿಧ […]

(Kalatturu) ಕಳತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಚ್ಚಿಲ ವಲಯದ ವತಿಯಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನೆರವೇರಿತು.

  ಪೂಜಾ ವಿಧಿ ವಿಧಾನಗಳನ್ನು ದೇವಸ್ಥಾನದ ಅರ್ಚಕ ರಂಗನಾಥ ಭಟ್ ನೆರವೇರಿಸಿದರು.

  ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪ್ರವೀಣ್ ಕುಮಾರ್‌ ಗುರ್ಮೆ ಉದ್ಘಾಟಿಸಿದರು.

ಅವರು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯು ಧಾರ್ಮಿಕ ವಿವಿಧ ಕಾರ್ಯಕ್ರಮಗಳನ್ನು ಸಾರ್ವಜನಿಕವಾಗಿ ಸಂಘಟನಾ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಸಂತೋಷ ತಂದಿದೆ ಎಂದರು.

ಅರ್ಚಕ ರಂಗನಾಥ ಭಟ್ ಧಾರ್ಮಿಕ ಪ್ರವಚನ ನೀಡಿ,    ಇಂತಹ ಪೂಜಾ ಕಾರ್ಯಕ್ರಮಗಳನ್ನು ಸಾರ್ವಜನಿಕವಾಗಿ ಆಚರಿಸಿದರೆ ಅನುಗ್ರಹ ಜಾಸ್ತಿಯಾಗುತ್ತದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ ಮಾತನಾಡಿ, ಕಳತ್ತೂರು ಒಕ್ಕೂಟದಿಂದ ಉತ್ತಮ ವ್ಯವಸ್ಥೆ ಆಗಿದೆ. ಕಾರ್ಯಕ್ರಮದ ಪದಾಧಿಕಾರಿಗಳು, ಸಂಘದ ಸದಸ್ಯರು ಈ ಮಹತ್ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಸಂಘವು ಇನ್ನಷ್ಟು ಬಲವರ್ಧನೆ ಗೋಳ್ಳಬೇಕು. ಇದಕ್ಕೆ ಪೂಜ್ಯ ಖಾವಂದರ ಸಹಕಾರ ಇದೆ ಎಂದು ಹೇಳಿದ ಅವರು, ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

 ಈ ಸಂದರ್ಭ ಪ್ರಸಾದ್ ಆಚಾರ್ಯ ಪಾದೂರು, ಹರೀಶ್ ಕುಲಾಲ್ ಕಳತ್ತೂರು, ಸೇವಾ ಪ್ರತಿನಿಧಿ ಯಶೋದಾ,  ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

  ಮೇಲ್ವಿಚಾರಕಿ ಶ್ರೀಮತಿ ವಿನುತಾ ಸ್ವಾಗತಿಸಿದರು. ಆಶಾ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.