ಶಿರ್ವ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ (Shirva: Young man commits suicide by writing a death note)
ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರ ಭೇಟಿ
(Udupi) ಉಡುಪಿ: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಶೆಡ್ ಬಳಿ ನಡೆದಿದೆ.
ಅಡುಗೆ ಕೆಲಸ ಮಾಡುತ್ತಿದ್ದ ಗೌತಮ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ.
ಸಾಲ್ಮರದ ಕ್ಯಾಟರಿಂಗ್ ಶೆಡ್ ಬಳಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಗೌತಮ್ ಅವಿವಾಹಿತನಾಗಿದ್ದು, ಕ್ಯಾಟರಿಂಗ್ ನಲ್ಲಿ ಮುಖ್ಯ ಅಡುಗೆ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ಎಲ್ಲರೊಂದಿಗೆ ಬೆರೆಯುತ್ತಿದ್ದ ಗೌತಮ್ ಸ್ಥಳೀಯ ವಿವಿಧ ಸಂಘ-ಸಂಸ್ಥೆಯಲ್ಲಿ ಸಕ್ರಿಯವಾಗಿದ್ದನು.
ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

