• Home  
  • ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎ.ಎಸ್.ಎಂ.ಇ ವಿದ್ಯಾರ್ಥಿ ಘಟಕದ ಉದ್ಘಾಟನೆ (Inaugration of ASME Student Section at SMVITM)
- ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎ.ಎಸ್.ಎಂ.ಇ ವಿದ್ಯಾರ್ಥಿ ಘಟಕದ ಉದ್ಘಾಟನೆ (Inaugration of ASME Student Section at SMVITM)

Share: ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎ.ಎಸ್.ಎಂ.ಇ ವಿದ್ಯಾರ್ಥಿ ಘಟಕದ ಉದ್ಘಾಟನೆ   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ  ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್   (Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ “ದಿ ಅಮೇರಿಕನ್ ಸೊಸೈಟಿ ಆಫ್ ಮೆಕ್ಯಾನಿಕಲ್ ಇಂಜಿನೀಯರ್ಸ್‌ (ಎ.ಎಸ್.ಎಂ.ಇ) ವಿದ್ಯಾರ್ಥಿ ಘಟಕದ ಉದ್ಘಾಟನೆ ಸಂಸ್ಥೆಯ ಆವರಣದಲ್ಲಿ ನಡೆಯಿತು.  ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಣಿಪಾಲ ತಾಂತ್ರಿಕ  ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ಸತ್ಯಶಂಕರ ಶರ್ಮಾರವರು ಭಾಗವಹಿಸಿ ದೀಪ ಬೆಳಗಿಸುವ […]

  (Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ “ದಿ ಅಮೇರಿಕನ್ ಸೊಸೈಟಿ ಆಫ್ ಮೆಕ್ಯಾನಿಕಲ್ ಇಂಜಿನೀಯರ್ಸ್‌ (ಎ.ಎಸ್.ಎಂ.ಇ) ವಿದ್ಯಾರ್ಥಿ ಘಟಕದ ಉದ್ಘಾಟನೆ ಸಂಸ್ಥೆಯ ಆವರಣದಲ್ಲಿ ನಡೆಯಿತು.

 ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಣಿಪಾಲ ತಾಂತ್ರಿಕ  ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ಸತ್ಯಶಂಕರ ಶರ್ಮಾರವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

   ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್ ಐತಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

  ಈ ಸಂದರ್ಭದಲ್ಲಿ ಎ. ಎಸ್. ಎಂ. ಇ ವಿದ್ಯಾರ್ಥಿ ಘಟಕದ ಸಂಯೋಜಕರಾದ ಸುಧೀರ್ ಸದಸ್ಯತ್ವವನ್ನು ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು.

  ಮುಖ್ಯ  ಅತಿಥಿಗಳಾದ ಡಾ. ಸತ್ಯಶಂಕರ ಶರ್ಮಾ ಇವರು ಮಾತನಾಡಿ, ಉದ್ಯಮಶೀಲ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಎ.ಎಸ್.ಎಂ.ಇ ಸದಸ್ಯತ್ವದ ಉಪಯೋಗವನ್ನು ಉತ್ತಮ ರೀತಿಯಲ್ಲಿ ಪಡೆಯುವಂತೆ ಸಲಹೆ ನೀಡಿದರು.

   ಸಂಸ್ಥೆಯ ಪ್ರಾಂಶುಪಾಲ ಡಾ. ನಾಗರಾಜ ಭಟ್ ಮುಖ್ಯ ಕಾರ್ಯನಿರ್ವಾಣಾಧಿ ಡಾ. ರಾದಾಕೃಷ್ಣ ಎಸ್ ಐತಾಳ್ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

 ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ರಾಜ ಯತೀಶ್ ಯಾದವ್ ನೆರೆದ ಎಲ್ಲರನ್ನು ಸ್ವಾಗತಿಸಿದರು. ಡಾ. ಮಂಜುನಾಥ ಎಸ್ ಪ್ರಾರ್ಥಿಸಿದರು. ಸುಧೀರ್ ವಂದಿಸಿದರು. ಶ್ರೀ ಅನಂತ ಮೋಹನ್ ಮಲ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.