ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ಅಮ್ಮನ ದರ್ಶನ ಪಡೆದ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್
ಶ್ರೀ ಕ್ಷೇತ್ರದ ವತಿಯಿಂದ ಜಗ್ಗೇಶ್ ರವರಿಗೆ ಗೌರವಾರ್ಪಣೆ
(Uchila) ಉಚ್ಚಿಲ : ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನವರಸ ನಾಯಕ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ರವರು ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು.
ಶ್ರೀ ಕ್ಷೇತ್ರದ ಅಧ್ಯಕ್ಷರಾದ ಗಿರಿಧರ ಸುವರ್ಣ, ಶೇಖರ ಪುತ್ರನ್, ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯ, ಶ್ರೀಶ ಉಪಾಧ್ಯಾಯ, ಪದ್ಮನಾಭ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.

