ಪಂಜಿಮಾರು ಹಾಲು ಉತ್ಪಾದಕರ ಕಟ್ಟಡಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಹಸ್ತ
ಮಂಜೂರಾತಿ ಪತ್ರ ಹಸ್ತಾಂತರಿಸಿದ ಯೋಜನಾಧಿಕಾರಿ ಮಮತಾ ಶೆಟ್ಟಿ
(Bantakal) ಬಂಟಕಲ್: ಬಂಟಕಲ್ ಪಂಜಿಮಾರು ಹಾಲು ಉತ್ಪದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿರುವ ರೂ. 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಸಮಿತಿಯ ಅಧ್ಯಕ್ಷರಾದ ಸಂತೋಷ ಶೆಟ್ಟಿ, ಸುಕೇಶ್ ಹಾಗೂ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಕಾಪು ತಾಲೂಕು ಜನಜಾಗೃತಿಯ ಸದಸ್ಯರುಗಳಾದ ಕೆ. ರಾಮರಾಯ ಪಾಟ್ಕರ್ ಹಾಗೂ ವಳದೂರು ಪ್ರಸಾದ್ ಶೆಟ್ಟಿ, ಕೇಂದ್ರ ಒಕ್ಕೂಟದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಸೇವಾಪ್ರತಿನಿಧಿ ಶ್ರೀಮತಿ ಪೂರ್ಣಿಮಾ ಉಪಸ್ಥಿತರಿದ್ದರು.

